ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳೂರಿನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ “ಸಂಚಾರಿ ಪೀಠ ” ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಕ್ರಮ

0

ಕೆವಿಜಿ ಕಾನೂನು ಕಾಲೇಜಿನ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ‘ಸಂಚಾರಿ ಪೀಠ ‘ಸ್ಥಾಪನೆ ಬಗ್ಗೆ ಹೋರಾಟದ ಮಾಹಿತಿ ನೀಡುವ ಕಾರ್ಯಕ್ರಮ ಸೆ. 20ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದರು ‘ಸಂಚಾರಿ ಪೀಠದ ‘ಮಹತ್ವದ ಕುರಿತು ಮಾತನಾಡಿದರು.

ದ. ಕ. ಜಿಲ್ಲಾ ಬಾರ್ ಅಸೋಸಿಯೇಷನ್ ನ ಉಪಾಧ್ಯಕ್ಷ, ಸುಳ್ಯ ಬಾರ್ ಅಸೋಸಿಯೇಷನ್ ನ ಅಧ್ಯಕ್ಷರಾದ ಸುಕುಮಾರ್ ಕೊಡ್ತುಗುಳಿ ಪ್ರಸ್ತಾವಿಕ ನುಡಿಗಳನ್ನಾಡಿದರು. ದ.ಕ. ಜಿಲ್ಲಾ ಬಾರ್ ಅಸೋಸಿಯೇಷನ್ ನ ಅಧ್ಯಕ್ಷರಾದ ರಿಚಾರ್ಡ್ ಕ್ರಾಸ್ತ ಸಂಚಾರಿ ಪೀಠದ ಅವಶ್ಯಕತೆ ಮತ್ತು ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು . ವೇದಿಕೆಯಲ್ಲಿ ಕಾಲೇಜಿನ ಪ್ರಾoಶುಪಾಲೆ ಪ್ರೊ. ಟೀನಾ ಎಚ್.ಎಸ್, ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ.ವಿ ದಾಮೋದರ ಗೌಡ ಉಪಸ್ಥಿತರಿದ್ದರು. ವಿದ್ಯಾರ್ಥಿ ನಿಯರಾದ ಕು. ರಮ್ಯಾ ಹಾಗೂ ಕು. ಚಂದನಾ ಪ್ರಾರ್ಥಿಸಿದರು.

ಕಾಲೇಜಿನ ಪ್ರಾoಶುಪಾಲೆ ಪ್ರೊ. ಟೀನಾ ಎಚ್.ಎಸ್ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಕಲಾವತಿ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಉಷಾ ಸಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಬಾರ್ ಅಸೋಸಿಯೇಷನ್ ನ ಸದಸ್ಯರು, ಸುಳ್ಯ ಬಾರ್ ಅಸೋಸಿಯೇಷನ್ ನ ಸದಸ್ಯರು, ವಕೀಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.