ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ.ಪೂ. ವಿಭಾಗದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸೆ.20ರಂದು ನಡೆಯಿತು.
ಪಂದ್ಯಾಟದ ಉದ್ಘಾಟನೆಯನ್ನು ಸುಳ್ಯ ಸ.ಪ.ಪೂ.ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ ನೆರವೇರಿಸಿ, ಶುಭಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ ಅಧ್ಯಕ್ಷತೆ ವಹಿಸಿದ್ದರು.









ಪ್ರೌಢಶಾಲಾ ವಿಭಾಗದ ಮುಖ್ಯಗುರುಗಳಾದ ಪ್ರಕಾಶ ಮೂಡಿತ್ತಾಯರು ಶುಭಹಾರೈಸಿದರು.
ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಮಂಜುಳಾ ಬಡಿಗೇರ್, ಅರಂತೋಡು ಎನ್ನೆಂಪಿಯುಸಿ ಕಾಲೇಜಿನ ದೈ.ಶಿ.ನಿರ್ದೇಶಕಿ ಶಾಂತಿ ಎ.ಕೆ., ಸುಳ್ಯ ಸ.ಪ.ಪೂರ್ವ ಕಾಲೇಜಿನ ದೈ.ಶಿ.ನಿರ್ದೇಶಕ ನಂದ ವೇದಿಕೆಯಲ್ಲಿ ಇದ್ದರು.
ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ ಸ್ವಾಗತಿಸಿದರು. ಉಪನ್ಯಾಸಕಿ ಸತ್ಯವತಿ ಕಾರ್ಯಕ್ರಮ ನಿರ್ವಹಿಸಿದರು.










