ಡಾ. ನವೀನ್ ಕುಮಾರ್ ಪೆರುವಾಜೆಯವರಿಗೆ ಡಾಕ್ಟರೇಟ್

0

ಮಂಗಳೂರಿನ ಯೆನೆಪೋಯ ವಿದ್ಯಾನಿಲಯದ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ
ಡಾ. ನವೀನ್ ಕುಮಾರ್ ಪೆರುವಾಜೆಯವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ.
ಇವರು ಇತ್ತೀಚಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿಯ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ವಾಣಿಜ್ಯ ಶಾಸ್ತ್ರಕ್ಕೆ ಸಂಬಂಧಿಸಿದ “ಫೈನಾನ್ಸಿಯಲ್ ಪರ್ಫಾರ್ಮೆನ್ಸ್ ಎನಾಲಿಸಿಸ್ ಆಫ್ ಸೆಲೆಕ್ಟ್ ಇನ್ಸೂರೆನ್ಸ್ ಕಂಪನಿ ಇನ್ ಇಂಡಿಯಾ “ಎಂಬ ಸಂಶೋಧನಾ ಪ್ರಬಂಧವನ್ನು ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ವಾಣಿಜ್ಯಶಾಸ್ತ್ರ ವಿಭಾಗದ ಪ್ರೊ. ಈಶ್ವರ ಪಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿ ಪಿ.ಎಚ್.ಡಿ ಪದವಿ ಪಡೆದಿದ್ದಾರೆ.
ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆ, ಪ್ರೌಢ ಶಿಕ್ಷಣವನ್ನು ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ, ಪದವಿಪೂರ್ವ ಶಿಕ್ಷಣವನ್ನು ಸರಕಾರಿ ಪದವಿಪೂರ್ವ ಕಾಲೇಜು ಬೆಳ್ಳಾರೆ, ಡಾ. ಕೆ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ (ಪೆರುವಾಜೆ)ಯಲ್ಲಿ ಪದವೀಧರರಾಗಿ, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿರುತ್ತಾರು. ಶೈಕ್ಷಣಿಕ ಹಂತದಲ್ಲಿ ಇವರು ಪ್ರಾಥಮಿಕ ಶಿಕ್ಷಣದಲ್ಲಿ ಪದವಿ ಪೂರ್ವ ಶಿಕ್ಷಣದಲ್ಲಿ ಮತ್ತು ಪದವಿ ಹಂತದಲ್ಲಿ ಸಂಸ್ಥೆಗೆ ಕಲಿಯುವಿಕೆಯಲ್ಲಿ ಮೊದಲಿಗರಾಗಿದ್ದರು. ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟoಪಾಡಿ ಮತ್ತು ಡಾ. ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಪೆರುವಾಜೆ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆಯಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುತ್ತಾರೆ. ಎಲ್ಐಸಿ ಹೌಸಿಂಗ್ ಫೈನಾನ್ಸ್ ನಲ್ಲಿ ಥರ್ಡ್ ಪಾರ್ಟಿ ವೆರಿಫಿಕೇಶನ್ ಎಕ್ಸಿಕ್ಯೂಟಿವ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಇವರು ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ರಾಮ ನಾಯ್ಕ ಮತ್ತು ಶ್ರೀಮತಿ ಗೀತಾ ದಂಪತಿಗಳ ಪುತ್ರ. ಇವರ ತಂದೆ ರಾಮ ನಾಯ್ಕರು ಅಟೋ ಚಾಲಕರಾಗಿದ್ದಾರೆ. ಧರ್ಮಪತ್ನಿ ರಮ್ಯಾ ಎಂ.ಕೆ ಗೃಹಿಣಿಯಾಗಿದ್ದು, ಓರ್ವ ಪುತ್ರನಿದ್ದಾನೆ. ಸಹೋದರ ನಯನ್ ಕುಮಾರ್ ಬೆಳ್ಳಾರೆಯಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದಾರೆ.