ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಅಮೃತ ಮಹೋತ್ಸವದ ಕರಪತ್ರ ಬಿಡುಗಡೆ

0

ಸುಳ್ಯ ಪದವಿಪೂರ್ವ ಕಾಲೇಜು ಇದರ 75ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ 2025 ಡಿಸೆಂಬರ್ ತಿಂಗಳಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಪ್ರಚಾರ ಪತ್ರವನ್ನು ಸೆ 28 ರಂದು ಶಾಲಾ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ ಬಿ ಸದಾಶಿವ, ಸಹ ಕೋಶಾಧಿಕಾರಿ ರಾಮಚಂದ್ರ, ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ, ಎಸ್ ಡಿ ಎಂ ಸಿ ಅಧ್ಯಕ್ಷೆ ಮಂಜುಳಾ ಬಡಿಗೇರ್, ಪ್ರಚಾರ ಸಮಿತಿ ಅಧ್ಯಕ್ಷ ಹಸೈನಾರ್ ಜಯನಗರ, ಹಿರಿಯ ವೈದ್ಯರಾದ ಡಾ.ಸಾಯಿ ಗೀತಾ, ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಶಿಕ್ಷಕ ವೃಂದದವರು, ಕಾಲೇಜು ಉಪನ್ಯಾಸಕರುಗಳು ಉಪಸ್ಥಿತರಿದ್ದರು.