ಸುಳ್ಯದ ಪಶು ಆಸ್ಪತ್ರೆಯಲ್ಲಿ ವಿಶ್ವ ರೇಬಿಸ್ ದಿನಾಚರಣೆ ಮತ್ತು ಪ್ರಾಣಿ ಕಲ್ಯಾಣ ಜಾಗೃತಿ ಕಾರ್ಯಕ್ರಮ ವನ್ನು ಸೆ.28 ರಂದು ಆಚರಿಸಲಾಯಿತು. ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ವಿವಿಧ ಪ್ರಚಾರ ಸಾಮಗ್ರಿಗಳನ್ನು ಮತ್ತು ಸಾಕು ಪ್ರಾಣಿಗಳಿಗಾಗಿ ಲಸಿಕ ಕಾರ್ಡುಗಳನ್ನು ಅನಾವರಣಗೊಳಿಸಲಾಯಿತು.

2030ರ ಒಳಗಾಗಿ ಭಾರತದಿಂದ ನಾಯಿಗಳಿಂದ ಹರಡುವ ರೇಬಿಸ್ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ರೇಬಿಸ್ ರೋಗ ನಿರೋಧಕ ಲಸಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ತಾಲೂಕಿನ ವಿವಿಧ ಶಾಲೆ ಕಾಲೇಜುಗಳಲ್ಲಿ ಪಶುಸಂಗೋಪನ ಇಲಾಖೆಯ ವತಿಯಿಂದ ರಿಯಲಿ ಸ್ಲೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯುತ್ತಿದೆ ಇದರಿಂದಾಗಿ ರೇಬಿಸ್ ರೋಗ ಮತ್ತು ಅದರ ನಿವಾರಣೋಪಾಯಗಳ ಬಗ್ಗೆ ಸಾಕಷ್ಟು ಅರಿವು ಮೂಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಾವೆಲ್ಲರೂ ಸೇರಿ ರೇಬಿಸ್ ರೋಗದ ನಿರ್ಮೂಲನ ಮಾಡಬೇಕಾಗಿದೆ ಎಂದು ಪಶು ಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ನಿತಿನ್ ಪ್ರಭು ಕೆ ತಿಳಿಸಿದರು.















ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ರಾಜಣ್ಣ ರವರು ಮಾತನಾಡಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲೂ ಎಲ್ಲಾ ಸಾಕು ನಾಯಿಗಳಿಗೂ ಪಶು ಸಂಗೋಪನೆ ಇಲಾಖೆಯ ಸಹಕಾರದೊಂದಿಗೆ ರೇಬಿಸ್ ರೋಗದ ವಿರುದ್ಧ ಲಸಿಕೆ ಹಾಕಿಸಿಕೊಳ್ಳುವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಲ್ಲಾ ಗ್ರಾಮಗಳಲ್ಲಿಯೂ ಈ ಕಾರ್ಯಕ್ರಮ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದೆ ಮುಂದಿನ ದಿನಗಳಲ್ಲಿ ಎಲ್ಲರೂ ಪಶುಸಂಗೋಪನೆ ಇಲಾಖೆಯೊಂದಿಗೆ ಸಹಕರಿಸಿ ರೇಬಿಸ್ ರೋಗದ ನಿರ್ಮೂಲನದಲ್ಲಿ ಭಾಗಿಯಾಗುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ನ ಕಾರ್ಯನಿರ್ವಹಣಾ ಅಧಿಕಾರಿಗಳಾದ ರಾಜಣ್ಣರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ರೋಟರಿ ಕ್ಲಬ್ ಸುಳ್ಯ ಇದರ ಅಧ್ಯಕ್ಷರಾದ ಡಾ.ರಾಮಮೋಹನ್ ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷರಾದ ಹೇಮಂತ್ ಕಾಮತ್ ಸುಳ್ಯದ ಉಪ ನಿರೀಕ್ಷಕರಾದ ಸಂತೋಷ್ ಬಿಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ., ಡಾ.ನಾಗರಾಜ್ ಪಶುಸಂಗೋಪನ ಇಲಾಖೆಯ ಸಿಬ್ಬಂದಿಗಳು ಮತ್ತು ಶ್ವಾನಪ್ರಿಯರು ಉಪಸ್ಥಿತರಿದ್ದರು.










