ಸುಳ್ಯ ದಸರಾ : ಸಾಂಸ್ಕೃತಿಕ ‌ಕಾರ್ಯಕ್ರಮ ಉದ್ಘಾಟನೆ

0

54 ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ‌ ದಸರಾ ಸೆ.29ರಿಂದ ಆರಂಭಗೊಂಡಿದೆ.

ಸಂಜೆ ಸಾಂಸ್ಕೃತಿಕ ಉದ್ಘಾಟನೆ ನಡೆಯಿತು. ಸುಳ್ಯ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿ ಮಾಧವ ಗೌಡರು ಸುಳ್ಯ ದಸರಾ ಉತ್ಸವ ಆಚರಣೆ ಕುರಿತು ಮಾತನಾಡಿದರು.

ಸುಳ್ಯ ಶ್ರೀ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷ ಡಾ.ಲೀಲಾಧರ್ ಅಧ್ಯಕ್ಷತೆ ವಹಿಸಿದ್ದರು “ಸುಳ್ಯ ದಸರಾ ಉತ್ಸವಕ್ಕೆ ಸುಳ್ಯದ ಜನರು ನೀಡುವ ಪ್ರೋತ್ಸಾಹವನ್ನು ಅವರು ನೆನಪಿಸಿ, 9 ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸುವಂತೆ ಕೇಳಿಕೊಂಡರು.

ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್., ಕಾರ್ಯದರ್ಶಿ ಎಂ.ಕೆ.ಸತೀಶ್,
ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ, ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್,
ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಕೋಶಾಧಿಕಾರಿ ಸುನಿಲ್‌ ಕೇರ್ಪಳ, ಮಹಿಳಾ ಸಮಿತಿ ಗೌರವಾಧ್ಯಕ್ಷೆ ಡಾ.ಯಶೋಧಾ ರಾಮಚಂದ್ರ, ಅಧ್ಯಕ್ಷೆ ಲತಾ ಮಧುಸೂದನ್, ಕಾರ್ಯದರ್ಶಿ ಶ್ವೇತಾ ಪ್ರಶಾಂತ್ ವೇದಿಕೆಯಲ್ಲಿದ್ದರು.

ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಕೆ.ಗೋಕುಲ್ ದಾಸ್ ಸ್ವಾಗತಿಸಿ, ಸುಳ್ಯದಲ್ಲಿ 54 ವರ್ಷಗಳ ಹಿಂದೆ ಆರಂಭಗೊಂಡ ಶಾರದಾಂಬ ಉತ್ಸವ ನಡೆದು ಬಂದ ದಾರಿಯ ಮೆಲುಕು ಹಾಕಿದರು.

ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರ್ವಹಿಸಿದರು. ರಾಜು ಪಂಡಿತ್ ವಂದಿಸಿದರು.