ಕೇನ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ

0

ಬಳ್ಪ ಗ್ರಾ.ಪಂ. ವ್ಯಾಪ್ತಿಯ ಕೇನ್ಯ ಗ್ರಾಮದ ಕೇನ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವಗಳು ಸೆ. 22ರಂದು ಆರಂಭಗೊಂಡು ಅ. 2ರ ತನಕ ವಿವಿಧ ವೈದಿಕ ಕಾರ್ಯಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ.
ಸೆ. 30ರಂದು ಬೆಳಿಗ್ಗೆ ಚಂಡಿಕಾ ಹೋಮ, ಅ. 1ರಂದು ಮಧ್ಯಾಹ್ನ ಆಯುಧಪೂಜೆ ನಡೆಯಿತು. ರಾತ್ರಿ ರಂಗಪೂಜೆ, ಅ. 2ರಂದು ಆಂಜನೇಯ ಸ್ವಾಮಿಗೆ ಅಲಂಕಾರ ಪೂಜೆ ನಡೆಯಲಿದೆ. ದೇವಸ್ಥಾನದ ಮೊಕ್ತೇಸರರಾದ ಗಿರಿನಾಥ ಶೆಟ್ಟಿ ಕೇನ್ಯಗುತ್ತು ಸೇರಿದಂತೆ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಳ್ಗೊಂಡರು.