ಬೆಳ್ಳಾರೆಯಲ್ಲಿ ಪಂಚ ಸಪ್ತತಿ,75 ದಿನಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

0

ಸ್ವಚ್ಛ ನಾಡು ಕಟ್ಟುವಲ್ಲಿ ಯುವಜನರ ಪಾತ್ರ ಮುಖ್ಯ : ನಮಿತಾ ಎಲ್ ರೈ

ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಬೆಳ್ಳಾರೆ ಸ್ನೇಹಿತರ ಕಲಾ ಸಂಘ ಆಶ್ರಯ ದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025 ಕಾರ್ಯಕ್ರಮ ಅ. 10ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆಯಿತು.

ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್ ರೈ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ನೇಹಿತರ ಕಲಾ ಸಂಘ ಅಧ್ಯಕ್ಷರ ವಸಂತ ಗೌಡ ಪಡ್ಪು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಮಾಯಿಲಪ್ಪ ಜಿ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿ ಸ್ವಚ್ಛತಾ ಅಭಿಯಾನ ಮಾಹಿತಿ ನೀಡಿದರು ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೀಣಾ ಮುಡಾಯಿತೋಟ, ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ಚಂದ್ರಶೇಖರ ಪನ್ನೆ, ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ, ಜ್ಞಾನದೀಪ ಶಿಕ್ಷಣ ಸಂಸ್ಥೆ ನಿರ್ದೇಶಕ ಉಮೇಶ್ ಮಣಿಕ್ಕಾರ ವೇದಿccಕೆಯಲ್ಲಿ ಉಪಸ್ಥಿತರಿದ್ದರು, ಸ್ನೇಹಿತರ ಕಲಾ ಸಂಘದ ಪೂರ್ವಾಧ್ಯಕ್ಷ ವಸಂತ ಉಲ್ಲಾಸ್ ಸ್ವಾಗತಿಸಿ, ಕಾರ್ಯದರ್ಶಿ ಗಣೇಶ್ ಪಾಟಾಳಿ ಕುರುoಬುಡೆಲು ವಂದಿಸಿದರು. ಯುವಜನ ಸಂಯುಕ್ತ ಮಂಡಳಿ ನಿರ್ದೇಶಕರಾದ ಸಂಜಯ್ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು