ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು
ಮೊಗರ್ಪಣೆ ಸೇತುವೆ ಸಮೀಪ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಅ 11ರಂದು ಬೆಳಿಗ್ಗೆ ಸಂಭವಿಸಿದೆ.















ಬೈಕ್ ಸವಾರ ಜಯನಗರ ತಮಿಳ್ ಕಾಲೋನಿಯ ವ್ಯಕ್ತಿಯಾಗಿದ್ದು ಕಲ್ಲುಗುಂಡಿ ಹೋಟೆಲ್ ಒಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು. ಮೊಗರ್ಪಣೆ ಸೇತುವೆ ಬಳಿ ಹೋಗುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಬರುತ್ತಿದ್ದ ಲಾರಿಗೆ ಪರಸ್ಪರ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಸ್ಥಳೀಯರು ಕೂಡಲೇ ಗಾಯಾಳುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.










