ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿ ಕೊಡುವಂತೆ ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

0

ಕುಕ್ಕೆ ಸುಬ್ರಹ್ಮಣ್ಯದ ಪರಿಸರದಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಸ್ಥಳೀಯ ಕಿರು ವ್ಯಾಪಾರಸ್ಥರು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ರವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹತ್ತು ವರ್ಷಗಳಿಂದ ನಾವು ಇಲ್ಲಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದೆವು.ಆದರೆ ಕಳೆದ ಒಂದು ವರ್ಷಗಳ ಹಿಂದೆ ಏಕಾಏಕಿ ನಮ್ಮ ಅಂಗಡಿಗಳನ್ನು ತೆರವುಗೊಳಿಸಿ ನಮ್ಮ ಜೀವನಕ್ಕೆ ಸಮಸ್ಯೆ ಉಂಟಾಗುವಂತೆ ಮಾಡಿದ್ದಾರೆ. ಸಂಬಂಧಪಟ್ಟ ಬೇರೆ ಬೇರೆ ಪ್ರತಿನಿಧಿಗಳಿಗೆ ಮನವಿ ಮಾಡಿದರು ಯಾವುದೇ ಸ್ಪಂದನೆ ಇಲ್ಲ. ಆದ್ದರಿಂದ ತಾವು ಮುತುವರ್ಜಿ ವಹಿಸಿ ಸಹಕರಿಸುವಂತೆ ಕೇಳಿಕೊಂಡಿದ್ದಾರೆ.

ಇದಕ್ಕೆ ಸ್ಪಂದಿಸಿರುವ ಅಶೋಕ್ ಕುಮಾರ್ ರೈ ರವರು ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿದ್ದು ಬೀದಿ ಬದಿ ವ್ಯಾಪಾರಸ್ಥರಿಗೆ ಅವಕಾಶ ಕೊಡಿ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಬೀದಿಬದಿ ವ್ಯಾಪಾರಕ್ಕೆ ಅವಕಾಶವನ್ನು ನೀಡಲಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ವ್ಯಾಪಾರ ಮಾಡಲು ಅನುಮತಿ ಕಲ್ಪಿಸುವಂತೆ ಸೂಚನೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.