ಹೃದಯ ಸಂಬಂಧಿ ಹಾಗೂ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿ

0

ಕೆಪಿಸಿಸಿ ಲೀಗಲ್ ಸೆಲ್ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಮೂಸಾ ಪೈಂಬೆಚ್ಚಾಲು ರವರಿಂದ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಿಗೆ ಮನವಿ

ರಾಜ್ಯದಲ್ಲಿ ಹೃದಯ ಸಂಬಂದಿ ಹಾಗೂ ಕ್ಯಾನ್ಸರ್ ಸಂಬಂಧಿ ಖಾಯಿಲೆಗಳು ವಿಪರೀತವಾಗಿ ಹೆಚ್ಚಾಗಿದ್ದು, ಸದ್ರಿ ಖಾಯಿಲೆಯಿಂದ ಬಳಲುತ್ತಿರುವ ಸಂಖ್ಯೆಯು ಹೆಚ್ಚಾಗಿರುತ್ತದೆ. ಅದರಲ್ಲೂ ವಿಶೇಷವಾಗಿ ಬಡ ಕೂಲಿ ಕಾರ್ಮಿಕರೇ ಆಗಿದ್ದು, ಅಂತಹ ರೋಗಿಗಳಿಗೆ ಚಿಕಿತ್ಸೆಗಾಗಿ ದೂರದ ಊರುಗಳಿಗೆ ತೆರಳುವ ಅನಿವಾರ್ಯತೆ ಇರುತ್ತದೆ. ಸದ್ರಿ ರೋಗಿಗಳಿಗೆ ಸರಕಾರವು ವಿಶೇಷ ಗುರುತಿನ ಚೀಟಿಯನ್ನು ನೀಡಿ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣವನ್ನು ಕಲ್ಪಿಸಲು ಸರ
ಅಗತ್ಯ ಕ್ರಮ ಕೈಗೊಂಡಲ್ಲಿ ರೋಗಿಗಳಿಗೆ ತುಂಬಾ ಅನುಕೂಲವಾಗುತ್ತದೆ.
ಆದುದರಿಂದ ಈ ಯೋಜನೆಯನ್ನು ಕೂಡಲೇ ಜಾರಿಗೆ ಮಾಡುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಮನವಿಯನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೂ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ..