ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮಕ್ಕೆ ಕವಿಗಳಿಗೆ ಆಹ್ವಾನ

0

ಚಂದನ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾದ ಸಂಧ್ಯಾ (ಸಾನು ) ಉಬರಡ್ಕ ಅವರ ನೇತೃತ್ವದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ದೀಪಾವಳಿ ಕವಿಗೋಷ್ಠಿ-2025” ಕಾರ್ಯಕ್ರಮವನ್ನು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅ. 26ರಂದು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1-00 ಗಂಟೆಯವರೆಗೂ ನಡೆಯುವ ದೀಪಾವಳಿ ಕವಿಗೋಷ್ಠಿ’ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬ ಕವಿಗಳಿಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತ ಇರುವ ಕವಿಗಳು 9845309239 ಈ ಸಂಖ್ಯೆಗೆ ಫೋನಾಯಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.ಎಂದು ಚಂದನ ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ಮತ್ತು ಸಾಹಿತಿ ಹಾಗೂ ಜ್ಯೋತಿಷ್ಯ ಎಚ್. ಭೀಮರಾವ್ ವಾಷ್ಠರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.