ನಿವೃತ್ತ ಆರೋಗ್ಯ ಸಂದರ್ಶಕಿ ನೀಲಾವತಿ ಕತ್ಲಡ್ಕ ಕಮಿಲ ನಿಧನ

0

ಪಶುವೈದ್ಯರಾಗಿದ್ದ ದಿ. ಡಾ.ಮೋಹನ ಗೌಡ ಕತ್ಲಡ್ಕರವರ ಧರ್ಮಪತ್ನಿ ನಿವೃತ್ತ ಹಿರಿಯ ಆರೋಗ್ಯ ಸಂದರ್ಶಕಿ ಗುತ್ತಿಗಾರು ಗ್ರಾಮದ ಕಮಿಲ ನಿವಾಸಿ ಶ್ರೀಮತಿ ನೀಲಾವತಿ ಕತ್ಲಡ್ಕ ರವರು ಅಸೌಖ್ಯದಿಂದ ಇಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪುತ್ರಿ ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ನಿರೂಪಣಾಧಿಕಾರಿ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆ, ಅಳಿಯ ನಿಕಟಪೂರ್ವ ತಾ.ಪಂ.ಸದಸ್ಯ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಸೇರಿದಂತೆ ಮೊಮ್ಮಕ್ಕಳು, ಓರ್ವ ಸಹೋದರ, ಮೂವರು ಸಹೋದರಿಯರು, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ 10 ಗಂಟೆಗೆ ಮೃತರ ಸ್ವಗೃಹದಲ್ಲಿ ನಡೆಯಲಿರುವುದಾಗಿ ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.