ಸೈಬರ್ ಜಾಗೃತಿಗಾಗಿ ಮಾನವ ಸರಪಳಿ ಹಾಗೂ ಜಾಗೃತಿ ಓಟ

2025 ನೇ ಸಾಲಿನ ಅಕ್ಟೊಬರ್ ತಿಂಗಳನ್ನು ರಾಷ್ಟ್ರೀಯ ಸೈಬರ್ ಭದ್ರತಾ ಜಾಗೃತಿ ಮಾಸವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಸುಳ್ಯ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಸುಳ್ಯ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ
ಸುಳ್ಯ ಕೆವಿಜಿ ವಿದ್ಯಾಸಂಸ್ಥೆ ಎನ್ ಎಂ ಸಿ ಕಾಲೇಜಿನ ಆಶ್ರಯದಲ್ಲಿ ರಾಷ್ಟ್ರೀಯ ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮ ಅ 25 ರಂದು ಕುರುಂಜಿ ಭಾಗ್ ನಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕ,ಎನ್ ಸಿ ಸಿ ಘಟಕ, ಯೂಥ್ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜೆರ್ಸ್ ಘಟಕಗಳು ಮತ್ತು ಇಂಜಿನಿಯರಿಂಗ್ ಕಾಲೇಜಿನ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
















ಸುಳ್ಯ ವ್ರತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಸಂತೋಷ್ ಬಿ ಪಿ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ, ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಸೀತಾರಾಮ್, ಎನ್ ಎಸ್ ಎಸ್ ಅಧಿಕಾರಿ ಹರಿಪ್ರಸಾದ್ ಎ ಬಿ, ಯುವ ರೆಡ್ ಕ್ರಾಸ್ ಅಧಿಕಾರಿ ಡಾ. ಅನುರಾಧ ಕುರುಂಜಿ, ರೇಂಜರ್ ರೋವರ್ಸ್ ಅಧಿಕಾರಿಗಳಾದ ಉಮೇಶ್, ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು, ಪೊಲೀಸ್ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎನ್ ಎಂ ಸಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸೈಬರ್ ಜಾಗೃತಿ ಕುರಿತು ಮಾಹಿತಿ ನೀಡಿದರು.
ಬಳಿಕ ಕುರುಂಜಿ ವೃತ್ತದಲ್ಲಿ ಸೈಬರ್ ಜಾಗೃತಿಗಾಗಿ ಓಟ ಮತ್ತು ಮಾನವ ಸರಪಳಿ ಚಟುವಟಿಕೆಗಳನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.










