ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟ

0

ದ. ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಚೊಕ್ಕಾಡಿ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಬೆಳ್ಳಾರೆ ಹೋಬಳಿ ಮಟ್ಟದ ಕ್ರೀಡಾಕೂಟವು ಅ. 24 ರಂದು ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಜರಗಿತು.

ಚೊಕ್ಕಾಡಿ ವಿದ್ಯಾ ಸಂಸ್ಥೆಗಳ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿ ಕ್ರೀಡಾಕೂಟದ
ಧ್ವಜಾರೋಹಣಗೈದರು.


ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಮೂಕಮಲೆ
ದೀಪ ಬೆಳಗಿಸಿ ಉದ್ಘಾಟಿಸಿದರು. ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.


ಚೊಕ್ಕಾಡಿ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ತೇಜಸ್ವಿ ಕಡಪಳ, ದೇವಚಳ್ಳ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಭಾಕರ ಎಂ, ಬೆಳ್ಳಾರೆ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಅನುರಾಧ, ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.


ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ ಸ್ವಾಗತಿಸಿದರು, ಸಹಶಿಕ್ಷಕಿ ಸಂಧ್ಯಾಕುಮಾರಿ ವಂದಿಸಿದರು. ಬೆಳ್ಳಾರೆ ಕೆ ಪಿ ಎಸ್ ನ ದೈಹಿಕ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು.


ಬೆಳ್ಳಾರೆ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ 17ರ ವಯೋಮಿತಿಯ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ ಸಮಗ್ರ ಪ್ರಶಸ್ತಿ ಗಳಿಸಿಕೊಂಡಿತು. 17ರ ವಯೋಮಿತಿಯ ಹುಡುಗರ ವಿಭಾಗದ ರನ್ನರ್ ಅಪ್ ಪ್ರಶಸ್ತಿ ಕೆ.ಪಿ.ಎಸ್. ಬೆಳ್ಳಾರೆ ಪ್ರೌಢಶಾಲೆ ಮತ್ತು ಹುಡುಗಿಯರ ವಿಭಾಗದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಗಳಿಸಿಕೊಂಡಿತು. 14ರ ವಯೋಮಿತಿಯ ಬಾಲಕರು ಮತ್ತು ಬಾಲಕಿಯರ ವಿಭಾಗದಲ್ಲಿ ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ಸಮಗ್ರ ಪ್ರಶಸ್ತಿ, ಬಾಲಕರ ಮತ್ತು ಬಾಲಕಿಯರ ವಿಭಾಗದ ರನ್ನರ್ ಅಪ್ ಪ್ರಶಸ್ತಿ ಕೆ.ಪಿ.ಎಸ್. ಬೆಳ್ಳಾರೆ ಪ್ರೌಢಶಾಲೆ ಗಳಿಸಿಕೊಂಡಿತು.