














ಕೆ ವಿ ಜಿ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನೆಯು ಅ. 25ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆಹರು ಮೆಮೋರಿಯಲ್ ಕಾಲೇಜಿನ ಸಮಾಜಾಶಾಸ್ತ್ರ ವಿಭಾಗದ ಮುಖ್ಯಸ್ತೆ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಧಿಕಾರಿ ಶ್ರೀಮತಿ ಚಿತ್ರಲೇಖ ಕೆ.ಎಸ್ ನೆರವೇರಿಸಿ ಶುಭಹಾರೈಸಿದರು. ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ ವಿ ದಾಮೋದರ ಗೌಡ , ಕಾಲೇಜಿನ ಪ್ರಾಂಶುಪಾಲೆ ಪ್ರೊ ಟೀನಾ ಎಚ್ ಎಸ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಸಂಯೋಜಕಿ ಉಪನ್ಯಾಸಕಿ ಶ್ರೀಮತಿ ನಯನ ಪಿ.ಯು, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯದರ್ಶಿ ತೇಜಸ್ ಎನ್, ಜತೆಕಾರ್ಯದರ್ಶಿ ಕು. ಪ್ರಲೋಕ್ಷಾ ಉಪಸ್ಥಿತರಿದ್ದರು. ವಿದ್ಯಾರ್ಥಿ ಅನೀಷ ಪ್ರಾರ್ಥಿಸಿದರು. ಕು. ಆಶಿಕಾ ಮತ್ತು ತಂಡ ರಾಷ್ಟ್ರೀಯ ಸೇವಾ ಯೋಜನಾ ಗೀತೆ ಹಾಡಿದರು. ರಾಷ್ಟ್ರೀಯ ಸೇವಾ ಘಟಕದ ಸಂಯೋಜಕಿ ಶ್ರೀಮತಿ ನಯನ ಪಿ ಯು ಸ್ವಾಗತಿಸಿ, ವಿದ್ಯಾರ್ಥಿನಿ ಪ್ರಲೋಕ್ಷಾ ವಂದಿಸಿದರು. ವಿದ್ಯಾರ್ಥಿನಿ ಅನುಷ್ಯ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮ ದಲ್ಲಿ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










