Home ಅಪಘಾತ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಮದುವೆ ವಾಹನ ಪಲ್ಟಿ

ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಮದುವೆ ವಾಹನ ಪಲ್ಟಿ

0

22 ಕ್ಕೂ ಅಧಿಕ ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು

ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸ್ಲೆ ತಿರುವಿನಲ್ಲಿ ವಾಹನ ಪಲ್ಟಿಯಾಗಿ ವ್ಯಾನ್‌ನಲ್ಲಿದ್ದವರಿಗೆ ಗಂಭೀರ ಗಾಯವಾದ ಘಟನೆ ವರದಿಯಾಗಿದೆ.


ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ಈ ಮದುವೆಗೆ ಹುಡುಗನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರೆಂದು ತಿಳಿದು ಬಂದಿದೆ. ವ್ಯಾನ್‌ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು , ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಆರು ಅಂಬ್ಯೂಲೆನ್ಸ್‌ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ.

NO COMMENTS

error: Content is protected !!
Breaking