ಎಲಿಮಲೆ : ನಶಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

0

ನಶಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಅ.29 ರಂದು ನಡೆಯಿತು.

ಹಿರಿಯ ಗ್ರಾಮೀಣ ಪುನರ್ವಸತಿ ಪುಟ್ಟಣ್ಣ ಪಿ. ವಲಿಕಜೆ ಅವರು ನಶ ಮುಕ್ತತೆ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ವಿಕಲಚೇತನ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರಾದ ದಿನೇಶ್ ದೇವಚಳ್ಳ, ಕುಸುಮಾವತಿ ನೆಲ್ಲೂರು ಕೆಮ್ರಾಜೆ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಶ ಮುಕ್ತತೆ ಅಂಗವಾಗಿ ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಸಂಧ್ಯಾ ಉಬರಡ್ಕ, ಸಹಶಿಕ್ಷಕ ವಸಂತ, ನಶಮುಕ್ತ ಭಾರತ ನಿರ್ಮಾಣಕ್ಕೆ ಪ್ರೌಢ ಮಕ್ಕಳ ಪಾತ್ರದ ಬಗ್ಗೆ ಮಾತನಾಡಿದರು.