ಬೆಳ್ಳಾರೆ ಕೆಪಿಎಸ್ ನ ನಿವೃತ್ತ ಶಿಕ್ಷಕಿ ಶ್ರೀಮತಿ ಯೋಗೀಶ್ವರಿಯವರಿಗೆ ಸನ್ಮಾನ – ಬೀಳ್ಕೊಡುಗೆ

0

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀಮತಿ ಯೋಗೀಶ್ವರಿಯವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವು ಅ.31 ರಂದು ಶಾಲೆಯಲ್ಲಿ ನಡೆಯಿತು.


ಶಾಲಾ ಮುಖ್ಯ ಗುರು ಮಾಯಿಲಪ್ಪ ಜಿ.ಮತ್ತು ಶಿಕ್ಷಕ ವೃಂದದವರು ಶ್ರೀಮತಿ ಯೋಗೀಶ್ವರಿ ಮತ್ತು ಸುಬ್ಬಯ್ಯ ವೈ.ಬಿ.ದಂಪತಿಯನ್ನು ಶಾಲು ,ಹೊದಿಸಿ ಫಲ, ಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಬಳಿಕ ಮಾತನಾಡಿ ನಿವೃತ್ತಿ ಜೀವನಕ್ಕೆ ಶುಭಹಾರೈಸಿದರು.
ಸನ್ಮಾನ ಸ್ವೀಕರಿಸಿದ ಶ್ರೀಮತಿ ಯೋಗೀಶ್ವರಿಯವರು ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ 31 ವರ್ಷಗಳ ಕಾಲ ವಿವಿಧ ಕಡೆಗಳ ಶಾಲೆಗಳಲ್ಲಿ ಸೇವೆ ಸಲ್ಲಿಸಿದ ದಿನಗಳನ್ನು ಸ್ಮರಿಸಿಕೊಂಡು ಸಹಕರಿಸಿದ ಎಲ್ಲರಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.