ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಹಾಗೂ ಜನಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಕೆ ವಿ ಜಿ ಅನುದಾನಿತ ಪ್ರೌಢ ಶಾಲೆ ಕೊಲ್ಲಮೊಗ್ರದಲ್ಲಿ ಇಲ್ಲಿ ಅ.31 ರಂದು ನಡೆಯಿತು.
















ಕೆ ವಿ ಜಿ ಅನುದಾನಿತ ಪ್ರೌಢ ಶಾಲೆಯ ಶಿಕ್ಷಕರಾದ ಶ್ರೀಮತಿ ಸಂಧ್ಯಾ ಅಧ್ಯಕ್ಷತೆವಹಿಸಿದ್ದರು.
ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಮಾಧವ ಚಾಂತಳರವರು ದೀಪ ಪ್ರಜ್ವಲಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಲೋಕೇಶ್ ಪಿರೇನ ಮನೆ ಮಾತನಾಡಿದರು. ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಚಂದ್ರಶೇಖರ ಕೊಂದಾಳ, ಕೊಲ್ಲಮೊಗ್ರ ಬಿ ಒಕ್ಕೂಟದ ಅಧ್ಯಕ್ಷರಾದ ಹೇಮಂತ್ ಸಿ, ಕೊಲ್ಲಮೊಗ್ರ ಬಿ ಒಕ್ಕೂಟದ ಉಪಾಧ್ಯಕ್ಷರಾದ ಚಂದ್ರಶೇಖರ ಕೋನಡ್ಕ, ಶಿರೂರು ಚಾಂತಳ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರಾದ ಶ್ರೀಮತಿ ರೇಖಾರವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರೌಢ ಶಾಲಾ ಮಕ್ಕಳು, ಶಿಕ್ಷಕರು ಭಾಗವಹಿಸಿದರು.
ಶಿಕ್ಷಕರಾದ ಲೋಕನಾಥ್ ಸ್ವಾಗತಿಸಿದರು. ಶಿಕ್ಷಕರಾದ ರಾಜೇಶ್ ಧನ್ಯವಾದವಿತ್ತರು.
ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ ಕಾರ್ಯನಿರೂಪಿಸಿದರು.










