ಗಡಿನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಇಂತಹ ಕಾರ್ಯಕ್ರಮಗಳು ಪ್ರೇರಣೆ – ಡಾ. ಅನಂತ ಪದ್ಮನಾಭ ಭಟ್ ಎರ್ಕಲ್ಪಾಡಿ

ಮಂಡೆಕೋಲು ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.3ರಂದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾಲಾಭಿವೃದ್ಧಿ ಸಮಿತಿ ಮಂಡೆಕೋಲು ವತಿಯಿಂದ ಕನ್ನಡ ಗಾನಯಾನ ಕಾವ್ಯ ಮಿಲನ
ಕಾರ್ಯಕ್ರಮ ನ.3 ರಂದು ನಡೆಯಿತು

ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾದ ಮುರಳೀಧರ ರೈ ಮೆರವಣಿಗೆಗೆ ಚಾಲನೆ ನೀಡಿದರು.
ಶಾಲಾ ಮಕ್ಕಳು ಘೋಷ ವಾಕ್ಯಗಳ ಮೂಲಕ, ಬ್ಯಾಂಡ್ ಸೆಟ್ ನೊಂದಿಗೆ ರಸ್ತೆಯ ಉದ್ದಗಲಕ್ಕೂ ಘೋಷವಾಕ್ಯವನ್ನು ನುಡಿಯುತ್ತಾ ಮೆರವಣಿಗೆಯಲ್ಲಿ ಸಾಗಿ ಬಂದರು.
















ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ರಾಷ್ಟ್ರ ಧ್ವಜಾರೋಹಣವನ್ನು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ಕನ್ನಡ ಧ್ವಜಾರೋಹಣ ನೆರವೇರಿಸಿದರು.

ಗಡಿನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗಿದೆ ಎಂದು
ಖ್ಯಾತ ವೈದ್ಯರಾದ ಡಾ ಅನಂತಪದ್ಮನಾಭ ಭಟ್ ಎರ್ಕಲ್ಪಾಡಿಯವರು ಹೇಳಿದರು.
ಅವರು ಕನ್ನಡ ಗಾನ ಯಾನ ಕಾವ್ಯ ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ನ ಅಧ್ಯಕ್ಷರಾದ
ಚಂದ್ರಶೇಖರ್ ಪೇರಾಲ್ ವಹಿಸಿದ್ದರು.
ರಾಜ್ಯೋತ್ಸವ ಉಪನ್ಯಾಸ ಕಾರ್ಯಕ್ರಮ ವನ್ನು ಕ.ಸಾ.ಪ.ದ ಕಾರ್ಯಾಕಾರಿ ಸಮಿತಿ ಸದಸ್ಯರು, ಅಜ್ಜಾವರ ಪ್ರೌಢ ಶಾಲೆಯ ಮುಖ್ಯೋಫ್ಯಾದ್ಯಾಯರಾದ ಗೋಪಿನಾಥ್ ಮೆತ್ತಡ್ಕ ನಡೆಸಿಕೊಟ್ಟರು.
ವೇದಿಕೆಯಲ್ಲಿ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ಸದಾನಂದ ಮಾವಜಿ, ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು ಇದರ ಮುಖ್ಯ ಶಿಕ್ಷಕರಾರ ಶ್ರೀಮತಿ ಮಂಜುಳಾ, ಕ.ಸಾ.ಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಬಡ್ಡಡ್ಕ, ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾದ ಮುರಳೀಧರ ರೈ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿವಿನುತಾ ಪಾತಿಕಲ್ಲು ಉಪಸ್ಥಿತರಿದ್ದರು.
ಸುರೇಶ್ ಕಣೆಮರಡ್ಕ ಸ್ವಾಗತಿಸಿ ರಾಮಚಂದ್ರ ಪಲ್ಲತ್ತಡ್ಕ ವಂದಿಸಿದರು.
ಕಸಾಪ ನಿರ್ದೇಶಕಿ ಶ್ರೀಮತಿ ಸಾವಿತ್ರಿ ಕಣೆಮರಡ್ಕ ನಿರೂಪಿಸಿದರು.










