ಪಿ ಯು ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸರ್ಕಾರ ಚಿಂತನೆ

0

ರಾಜ್ಯ ಸರ್ಕಾರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಸರ್ಕಾರಿ ಪಿಯೂ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಭಾಗ್ಯ ಸಿಕ್ಕಿದೆ.

ಈಗಾಗಲೇ 10ನೇ ತರಗತಿಯ ವರೆಗೆ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿ ಊಟ ಸಿಗುತ್ತಿದೆ. ಇದೀಗ ಹೊಸದಾಗಿ ಪಿಯೂ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪಿಯೂ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಲು ಸರ್ಕಾರ ಚಿಂತಿಸಿದೆ. ರಾಜ್ಯದಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪಿಯೂ ವ್ಯಾಸಂಗ ಮಾಡುತ್ತಿದ್ದಾರೆ. ಅದರಲ್ಲೂ ಹಳ್ಳಿಗಾಡಿನ ಮಕ್ಕಳೇ ಹೆಚ್ಚು ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದೀಗ ಕಾಲೇಜು ವಿದ್ಯಾರ್ಥಿಗಳಿಗೂ ಬಿಸಿ ಊಟ ವಿತರಣೆಯ ಚಿಂತನೆ ಮೂಲಕ ಬಡ ಮಕ್ಕಳಿಗೆ ಮತ್ತೊಂದು ಭಾಗ್ಯ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.