














ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ಹ್ಯಾಮರ್ ಥ್ರೋ ಹಾಗೂ ಡಿಸ್ಕಸ್ ಥ್ರೋ ಸ್ಪರ್ಧೆಗಳಲ್ಲಿ ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ದೀನ್ ರಾಜ್ ಬಿ.ಜೆ.ರವರು ಪ್ರಥಮ ಸ್ಥಾನವನ್ನು ಪಡೆದು ಗುಲ್ಬರ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಆಡಳಿತ ಮಂಡಳಿ ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.










