














ಬೆಳ್ಳಾರೆ ಗ್ರಾಮ ಪಂಚಾಯತ್ ಕಟ್ಟಡಕ್ಕೆ ಒಂದು ಕೋಟಿ ರೂ. ಅನುದಾನ ನೀಡಬೇಕೆಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಎಚ್. ಎಮ್. ಹಮೀದ್ ಬೆಳ್ಳಾರೆ ಅವರು ಮನವಿ ಮಾಡಿದ್ದಾರೆ.
ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರದಲ್ಲಿ ಅನುದಾನವನ್ನು ಬಿಡುಗಡೆ ಮಾಡುವ ಭರವಸೆ ನೀಡಿರುವುದಾಗಿ ಹಮೀದ್ ರವರು ತಿಳಿಸಿದ್ದಾರೆ.










