ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ
ತೊಡಿಕಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 75 ವರ್ಷ ತುಂಬಿದ್ದು ಇದರ ಅಮೃತ ಮಹೋತ್ಸವವನ್ನು ಶಾಲಾ ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರವರ ಸಹಭಾಗಿತ್ವ ದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು ಇದರ ಪೂರ್ವಭಾವಿ ಸಭೆಯು ನ. 06 ರಂದು ಶಾಲೆಯಲ್ಲಿ ನಡೆಯಿತು.
















ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನವೀನ್ ಎ.ಬಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಅಮೃತ ಮಹೋತ್ಸವ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿ ಸಂತೋಷ್ ಕುತ್ತಮೊಟ್ಟೆಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಪೂರ್ಣ ಪ್ರಮಾಣದಲ್ಲಿ ಸಮಿತಿಯನ್ನು ಹಾಗೂ ಉಪ ಸಮಿತಿಗಳನ್ನು ಮುಂದಿನ ಸಭೆಯಲ್ಲಿ ರಚಿಸುವುದಾಗಿ ನಿರ್ಧರಿಸಲಾಯಿತು.
ಅಮೃತ ಮಹೋತ್ಸವದ ನೆನಪಿಗಾಗಿ ಶಾಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಕುರಿತು ಚರ್ಚಿಸಲಾಯಿತು.
ಶಾಲಾ ಎಸ್. ಡಿ.ಎಮ್.ಸಿ ಉಪಾಧ್ಯಕ್ಷೆ ಸೌಮ್ಯ ಭಟ್, ಶಾಲೆಯ ಹಿರಿಯ ವಿದ್ಯಾರ್ಥಿಗಳಾಗಿದ್ದು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ದೀಪಕ್ ಕುತ್ತಮೊಟ್ಟೆ , ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಭವಾನಿ ಚಿಟ್ಟನೂರು, ರವೀಂದ್ರ ಪೂಜಾರಿ ಪಂಜಿಕೋಡಿ, ರಮಾನಂದ ಬಾಳೆಕಜೆ, ವಿಜೇತ್ ಮರುವಳ, ತಿಮ್ಮಯ್ಯ ಮೆತ್ತಡ್ಕ, ಪ್ರೇಮಾ ವಸಂತ ಭಟ್, ಕೆ ಕೆ ನಾರಾಯಣ, ಚಂದ್ರಶೇಖರ ಆಚಾರ್ಯ, ಹೇಮಾವತಿ ಮೆತ್ತಡ್ಕ, bಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಸುಂದರ ಬಾಜಿನಡ್ಕ ಸೇರಿದಂತೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ಪೋಷಕರು, ಎಸ್ ಡಿ ಎಮ್ ಸಿ ಸದಸ್ಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಅರುಣ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶಿಕ್ಷಕ ವೃoದದವರು ಸಹಕರಿಸಿದರು.










