








ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ 70 ನೇ ಕನ್ನಡ ರಾಜ್ಯೋತ್ಸವದ ನ. 7ರಂದು ನಡೆಯಿತು. ಧ್ವಜಾರೋಹಣದ ಬಳಿಕ ಕನ್ನಡತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಹಿತಿ ಹಾಗೂ ಮಡಿಕೇರಿ, ಕೊಡಗು ಜಿಲ್ಲೆಯ ಮೀನುಗರಿಕಾ ಇಲಾಖಾ ಸಹಾಯಕ ನಿರ್ದೇಶಕರಾದ ಶ್ರೀಮತಿ ಮಿಲನ ಕೆ ಭರತ್,’ಕನ್ನಡ ಭಾಷೆಗೆ ಪ್ರಾಚೀನವಾದ ಚರಿತ್ರೆಯಿದೆ. ವಿಶ್ವದ ವಿವಿಧ ಭಾಷೆಗಳಲ್ಲಿ ಕನ್ನಡ ಭಾಷೆ ಶ್ರೀಮಂತ ಪರಂಪರೆಯನ್ನು ಹೊಂದಿದೆ. ಕನ್ನಡಿಗರಾದ ನಾವೆಲ್ಲರೂ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವ ಕಾರ್ಯದಲ್ಲಿ ತೊಡಗಬೇಕು ” ಎಂದರು.

ಕಾರ್ಯಕ್ರಮದ ಇನ್ನೊರ್ವ ಅತಿಥಿ, ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ನೆಹರು ಮೆಮೋರಿಯಲ್ ಕಾಲೇಜಿನ ಆಡಳಿತಧಿಕಾರಿ ಚಂದ್ರಶೇಖರ ಪೇರಾಲ್ ಮಾತನಾಡಿ, “ಕಾನೂನು ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವುದು ಅಭಿನಂದನೀಯ. ಕಾನೂನು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಕನ್ನಡವನ್ನು ಅಳವಡಿಸಿಕೊಂಡರೆ ಕಾನೂನು ಭಾಷಾ ಬೆಳವಣಿಗೆಗೆ ಪೂರಕವಾಗುತ್ತದೆ. ” ಎಂದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಟೀನಾ ಎಚ್.ಎಸ್, ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ.ವಿ ದಾಮೋದರ ಗೌಡ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀಮತಿ ಕಲಾವತಿ ಎಮ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವಿದ್ಯಾರ್ಥಿನಿ ಕು. ಪ್ರಲೋಕ್ಷಾ ಪ್ರಾರ್ಥಿಸಿದರು. ಕು. ಶರಣ್ಯ ಸ್ವಾಗತಿಸಿ, ಕು. ಅನುಷಾಪಲ್ಲವಿ ವಂದಿಸಿದರು. ವಿದ್ಯಾರ್ಥಿ ರಂಜಿತ್ ಎಚ್.ಎಮ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ ಸಂಯೋಜಕಿ ಶ್ರೀಮತಿ ಕೃತಿಕ ಜೆ ವೈಪಾನ ಕಾರ್ಯಕ್ರಮ ಸಂಯೋಜಿಸಿದರು.










