ಸುಳ್ಯ ಯೋಜನಾ ಪ್ರಾಧಿಕಾರದಲ್ಲಿ ಸದಸ್ಯ ಕಾರ್ಯದರ್ಶಿ, ನಗರ ಮತ್ತು ಗ್ರಾಮಾoತರ ಯೋಜನಾ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕರು ಸ್ವಾತಿ ಎನ್. ಸ್ವಾಮಿ ಮತ್ತು ಟೌನ್ ಪ್ಲಾನರ್ ಫೈರೋಜ್ ರವರ ಉಪಸ್ಥಿತಿಯಲ್ಲಿ, ಪ್ರಾಧಿಕಾರ ದ ಅಧ್ಯಕ್ಷ ಕೆ. ಎಂ. ಮುಸ್ತಫರವರ ಮಾರ್ಗದರ್ಶನದಲ್ಲಿ 9 & 11, ಏಕ ನಿವೇಶನ ವಿನ್ಯಾಸ ಅನುಮೋದನೆ, ಪರವಾನಿಗೆ ಮೊದಲಾದ ಪ್ರಸ್ತಾವನೆಗಳನ್ನು ಅರ್ಜಿದಾರರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿ ಅನುಮೋದನೆ ನೀಡುವ ಮಾದರಿ ಕ್ರಮ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫರವರು, ” ಸುಳ್ಯ ಯೋಜನಾ ಪ್ರಾಧಿಕಾರದಲ್ಲಿ ಸ್ವೀಕರಿಸುವ ಅರ್ಜಿಗಳನ್ನು ಅದಾಲತ್ ಮಾದರಿಯಲ್ಲಿ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು. ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು” ಎಂದರು.










ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸ್ವಾತಿಯವರು ಹಲವು ಕಡತಗಳಿಗೆ ಸ್ಥಳದಲ್ಲೇ ಮಂಜೂರಾತಿ ನೀಡಿದರು.










