ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಸುಳ್ಯ ವತಿಯಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ

0

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ ತಾಲೂಕು ವಕೀಲರ ಸಂಘ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ನ.10 ರಂದು ವಕೀಲರ ಸಂಘದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಬಿ.ಮೋಹನ್ ಬಾಬುರವರು ನೆರವೇರಿಸಿ ಮಾತನಾಡಿ ‘ಕಾನೂನಿನಡಿಯಲ್ಲಿ ಎಲ್ಲರಿಗೂ ಸಮಾನವಾದ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾನೂನು ಪ್ರಾಧಿಕಾರ ಸಮಿತಿಗಳು ಕಾರ್ಯನಿರ್ವಹಿಸುತ್ತದೆ. ಲೋಕ ಅದಾಲತ್ ಎಂಬ ಕಾರ್ಯಕ್ರಮವನ್ನು ಜಾರಿಗೆ ತರುವ ಮೂಲಕ ಅನೇಕ ಮಂದಿ ಫಲಾನುಭವಿಗಳಿಗೆ ನ್ಯಾಯ ಸಿಗುವಂತೆ ಮತ್ತು ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿದೆ. ಅಲ್ಲಲ್ಲಿ ಕಾನೂನು ಅರಿವುಗಳ ಕಾರ್ಯಕ್ರಮವನ್ನು ನೀಡುವ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯವನ್ನು ಕಾನೂನು ಸೇವ ಸಮಿತಿ ಮಾಡುತ್ತಿದೆ.


ಈ ಎಲ್ಲಾ ಕಾರ್ಯಕ್ರಮಗಳಿಗೆ ನ್ಯಾಯಾಲಯದ ವಕೀಲರುಗಳ ಸಂಪೂರ್ಣ ಸಹಕಾರ ಸಿಗುತ್ತಿದ್ದು ಕಾರ್ಯಕ್ರಮಗಳು ಯಶಸ್ವಿಯಾಗಲು ಸಹಕಾರಿಯಾಗಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ವಕೀಲರ ಸಂಘದ ಅಧ್ಯಕ್ಷ ಸುಕುಮಾರ್ ಕೊಡ್ತುಗುಳಿಯವರು ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ ಡಿ ಪಿ
ಹಿರಿಯ ವಕೀಲರಾದ ಕೆ ರವೀಂದ್ರನಾಥ ರೈ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ನ್ಯಾಯಾಲಯದ ಹಿರಿಯ ನ್ಯಾಯವಾದಿ ದಳ ಸುಬ್ರಾಯ ಭಟ್
ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಕುರಿತು ಮಾಹಿತಿಯನ್ನು ನೀಡಿದರು.

ಪ್ರಧಾನ ಕಾರ್ಯದರ್ಶಿ ಜಗದೀಶ್ ಡಿ ಪಿ ಸ್ವಾಗತಿಸಿ ಪೇನಲ್ ವಕೀಲರಾದ ರಂಜಿತ್ ಕುಕ್ಕೆಟ್ಟಿ ವಂದಿಸಿ ಹರೀಶ್ ಬೂಡುಪನ್ನೆ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಸುಳ್ಯ ನ್ಯಾಯಾಲಯದ ವಕೀಲರುಗಳು, ಸಿಬ್ಬಂದಿ ವರ್ಗದವರು, ಆರಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.