ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಡೆದ ಸ್ಪರ್ಧೆಗಳು
ನ. 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಧ ಅಂಗವಾಗಿ ನ.9 ರಂದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ನಿವೃತ್ತ ಯೋಧರಾದ ಗಂಗಾಧರ ದಂಬೆಕೋಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.















ಶಿವರಾಮ ಶಾಸ್ತ್ರಿ ಆಚಳ್ಳಿ, ತೇಜಪ್ಪ ಮಾಸ್ತರ್ ಸಂಪ್ಯಾಡಿ, ಲತಾಶ್ರೀ ಸುಪ್ರೀತ್ ಮೋಂಟಡ್ಕ ವಿನೋದ್ ಮೂಡಗದ್ದೆ, ರಮೇಶ್ ಮೆಟ್ಟಿನಡ್ಕ, ಕೃಷ್ಣ ಪ್ರಸಾದ್ ಕೋಲ್ಚಾರ್, ಸ್ಮಿತಾ ಮರಕತ, ದಿವ್ಯ ಸುಜನ್ ಗುಡ್ಡೆಮನೆ ಉಪಸ್ಥಿತರಿದ್ದರು.
ಸಾಹಿತ್ಯ ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಪ್ರಧಾನ ಕಾರ್ಯದರ್ಶಿ ಹೆಚ್.ಬಿ ಕೇಶವ ಹೊಸೊಳಿಕೆ, ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ, ಗೌರವ ಕಾರ್ಯದರ್ಶಿ ರೂಪವಾಣಿ.ಬಿ, ಸಂಘಟನಾ ಕಾರ್ಯದರ್ಶಿ ಕುಶಾಲಪ್ಪ ತುಂಬತ್ತಾಜೆ, ಸದಸ್ಯರಾದ ಶ್ರೀಮತಿ ಪೂರ್ಣಿಮಾ, ಸಂಘಟಕರಾದ ಯೋಗೀಶ್ ಹೊಸೋಳಿಕೆ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ವಿಜೇತರಿಗೆ ಸಾಹಿತ್ಯ ಸಮ್ಮೇಳನ ದಿನ ಬಹುಮಾನ ವಿತರಣೆ ನಡೆಯಲಿದೆ.










