















ನಾಪೋಕ್ಲುವಿನ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ ವತಿಯಿಂದ ನಡೆದ ಮಡಿಕೇರಿ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಸಂಪಾಜೆ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ದೈಹಿಕ ಶಿಕ್ಷಕರಾದ ಕೆ. ಕುಶಾಲಪ್ಪರವರ ಮಾರ್ಗದರ್ಶನದಲ್ಲಿ ಉತ್ತಮ ಸಾಧನೆ ಮಾಡಿದ ವಿಜೇತ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ಎಲ್ಲಾ ವಿದ್ಯಾರ್ಥಿಗಳು ಅಭಿನಂದಿಸಿ ಶುಭಹಾರೈಸಿದ್ದಾರೆ.










