ಸುಳ್ಯ ತಾಲೂಕಿನ ಹಿರಿಯ ಸಹಕಾರಿ ಪಿ.ಸಿ.ಜಯರಾಮರಿಗೆ ಕರ್ನಾಟಕ ಸರಕಾರವು ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ ನ. 14 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಏರ್ಪಡಿಸಲಾಗುವ ಸಹಕಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.















ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸುಳ್ಯ ಬ್ಲಾಕ್‌ನ ಅಧ್ಯಕ್ಷರಾಗಿರುವ ಪಿ.ಸಿ.ಜಯರಾಮರವರು , ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷರಾಗಿ ೧೯೯೭ರಿಂದ ೨೦೦೭ ರ ವರೆಗೆ ಹಾಗೂ ೨೦೨೦ರಿಂದ ೨೦೨೫ ರ ವರೆಗೆ ೧೫ ವರ್ಷಗಳ ಕಾಲ ಅಧ್ಯಕ್ಷರಾಗಿ, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ೧೯೮೭ ರಿಂದ ೨೦೨೪ ರ ವರೆಗೆ ನಿರಂತರ ೩೭ ವರ್ಷ ಸೇವೆ ಸಲ್ಲಿಸಿದ್ದರು. ಟಿಎಪಿಸಿಎಂಎಸ್‌ನ ನಿರ್ದೇಶಕರಾಗಿ. ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು ಇದರ ನಿರ್ದೇಶಕರಾಗಿ, ಸುದ್ದಿ ಸೌಹಾರ್ದ ವಿವಿದೋದ್ಧೇಶ ಸಹಕಾರಿ ಸಂಘದ ಪುತ್ತೂರು ಇದರ ಮುಖ್ಯ ಪ್ರವರ್ತಕರಾಗಿ, ಸುಳ್ಯ ಪಯಸ್ವಿನಿ ಸ್ತ್ರೀ ಶಕ್ತಿ ಮಹಿಳಾ ವಿವಿದೋದ್ಧೇಶ ಸಹಕಾರಿ ಸಂಘದ ಸಲಹಾ ಸಮಿತಿ ಸದಸ್ಯರಾಗಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ, ಮಡಪ್ಪಾಡಿ ಗ್ರಾ.ಪಂ. ಸದಸ್ಯರಾಗಿ, ಸುಳ್ಯ ತಾ.ಪಂ.ಸದಸ್ಯ ಹಾಗೂ ಉಪಾಧ್ಯಕ್ಷರಾಗಿ, ತಾ.ಪಂ.ನ ವಿಪಕ್ಷ ನಾಯಕರಾಗಿ, ಸಾಮಾಜಿಕ ಕ್ಷೇತ್ರಗಳಾದ ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷರಾಗಿ, ಗೌಡ ಸೋಶಿಯೋ ಎಜ್ಯುಕೇಶನ್ ಫೌಂಡೇಶನ್‌ನ ನಿರ್ದೇಶಕರಾಗಿ, ಗೌಡ ಯುವ ಸಮುದಾಯ ಭವನ ನಿರ್ಮಾಣ ಸಮಿತಿಯ ಕೋಶಾಧ್ಯಕ್ಷರಾಗಿ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಗೆ ಒಳಪಟ್ಟ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಇದರ ಅಧ್ಯಕ್ಷರಾಗಿ, ನಿರ್ದೇಶಕರಾಗಿ, ಕೆವಿಜಿ ಸಮಾಜ ಸೇವಾ ಸಂಘದ ಸ್ಥಾಪಕ ಕೋಶಾಧಿಕಾರಿಯಾಗಿ, ಅಧ್ಯಕ್ಷರಾಗಿ, ಗುತ್ತಿಗಾರು ಜೇಸಿಸ್‌ನ ಅಧ್ಯಕ್ಷರಾಗಿ, ಗುತ್ತಿಗಾರು ಲಯನ್ಸ್ ಕ್ಲಬ್‌ನ ಅಧ್ಯಕ್ಷರಾಗಿ, ಮಡಪ್ಪಾಡಿ ಶಾಲಾ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.










