ಪಂಜ: ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಸಮಾರೋಪ ಸಮಾರಂಭ

0

ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಮೂಡಬಿದಿರೆ ಚಾಂಪಿಯನ್

ಹೊಸ ದಾಖಲೆ ಮಾಡಿದ ಪುತ್ತೂರಿನ ಜಿ ಯಂ ಕೀರ್ತಿ

ಕರ್ನಾಟಕ ಸರಕಾರ,ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇದರ ಆಶ್ರಯದಲ್ಲಿ
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ಮತ್ತು 17 ವಯೋಮಾನದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ 2025-26 ನ.12 ಮತ್ತು ನ.13 ಪಂಜ ಸರಕಾರಿ ಪದವಿ ಕಾಲೇಜು ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆಯಿತು.


ಫಲಿತಾಂಶ:


14ರ ವಯೋಮನದಲ್ಲಿ 73 ಅಂಕ ಮತ್ತು 17 ರ ವಯೋಮಾನದಲ್ಲಿ
138 ಅಂಕ ಪಡೆದ ಮೂಡಬಿದಿರೆ ತಾಲೂಕು ಎರಡೂ ವಿಭಾಗದಲ್ಲಿ ಚಾಂಪಿಯನ್ ಗಳಿಸಿದ್ದಾರೆ.

14 ವಯೋಮನದಲ್ಲಿ 41ಅಂಕ ಮತ್ತು 17 ವಯೋಮಾನದಲ್ಲಿ 72 ಅಂಕ ಪಡೆದ ಪುತ್ತೂರು ತಾಲೂಕು ಎರಡೂ ವಿಭಾಗದಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾರೆ.

ತಂಡ ಚಾಂಪಿಯನ್: 14 ರ ವಯೋಮಿತಿಯಲ್ಲಿ ಬಾಲಕರ ವಿಭಾಗದಲ್ಲಿ 49 ಅಂಕ ಪಡೆದ ಮೂಡಬಿದಿರೆ.ಮತ್ತು ಬಾಲಕಿಯರ ವಿಭಾಗದಲ್ಲಿ 27 ಅಂಕ ಪಡೆದ ಪುತ್ತೂರು ಚಾಂಪಿಯನ್ ಪಡೆದಿದ್ದಾರೆ. 17 ರ ವಯೋಮಾನದಲ್ಲಿ ಬಾಲಕರ ವಿಭಾಗದಲ್ಲಿ 75 ಅಂಕ ಪಡೆದು ಮೂಡಬಿದಿರೆ ಚಾಂಪಿಯನ್. ಬಾಲಕಿಯರ ವಿಭಾಗದಲ್ಲಿ 63 ಅಂಕ ಪಡೆದ ಮೂಡಬಿದಿರೆ ಚಾಂಪಿಯನ್ ಆಗಿದ್ದಾರೆ.


ಹೊಸ ದಾಖಲೆ ಮಾಡಿದ : ಜಿ ಯಂ ಕೀರ್ತಿ


17 ರ ವಯೋಮಿತಿಯಲ್ಲಿ ಪುತ್ತೂರಿನ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿ ಯಂ ಕೀರ್ತಿ 100ಮೀಟರ್ ಹರ್ಡಲ್ಸ್, ತ್ರಿವಿಧ ಜಿಗಿತ, ಎತ್ತರ ಜಿಗಿತ ಮೂರರಲ್ಲೂ ಹೊಸ ಕೂಟ ದಾಖಲೆ ಮಾಡಿದ್ದಾರೆ ಮತ್ತು ವೈಯಕ್ತಿಕ ಚಾಂಪಿಯನ್ ಪಡೆದಿದ್ದಾರೆ.
ಬಾಲಕರ ವಿಭಾಗದಲ್ಲಿ ಮೂಡಬಿದಿರೆ ಪುತ್ತಿಗೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಂತೋಷ್ ಜಿ. 14 ರ ವಯೋಮಾನದಲ್ಲಿ ಬಾಲಕರ ವಿಭಾಗದಲ್ಲಿ ಮೂಡಬಿದಿರೆ ಪುತ್ತಿಗೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸುಭಾಷ್ ಎ ಆರ್. ಬಾಲಕಿಯರ ವಿಭಾಗದಲ್ಲಿ ಮಂಗಳೂರು ಉತ್ತರ ಕುಲಶೇಖರ ಎಸ್ ಟಿ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಭುವಿ ಅರಸ ವೈಯಕ್ತಿಕ ಚಾಂಪಿಯನ್ ಪಡೆದಿದ್ದಾರೆ.

ಸಮಾರೋಪ ಸಮಾರಂಭ:

ಸಮಾರೋಪ ಸಮಾರಂಭದಲ್ಲಿ ಕ್ರೀಡಾ ಕೂಟ ಅಯೋಜನಾ ಸಮಿತಿ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು ಸಭಾಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಪಂಜ ಸರಕಾರಿ ಪದವಿ ಕಾಲೇಜು ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಮಾಧವ ಗೌಡ ಜಾಕೆ, ಪಂಜ ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕುದ್ವ . ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು ಕೆ,ಸುಳ್ಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಪಂಜ ಸರಕಾರಿ ಪದವಿ ಪೂರ್ವ ಕಾಲೇಜುನ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ಲು, ನಿವೃತ್ತ ಯುವ ಜನ ಕ್ರೀಡಾಧಿಕಾರಿ ಮಾಧವ ಬಿ ಕೆ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಣ್ಣ ಬರೆಮೇಲು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್,ಗ್ರಾಮ ಪಂಚಾಯತ್ ಸದಸ್ಯ ಲಿಖೀತ್ ಪಲ್ಲೋಡಿ, ತಾಲೂಕು ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮನಾಭ ಮಲ್ಲಾರ, ಕ್ರೀಡಾಕೂಟ ಆಯೋಜನ ಸಮಿತಿ ಸಂಚಾಲಕ ಮತ್ತು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ರೈ ಬಿರ್ಕಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕರುಣಾಕರ ಮಣಿಯಾಣಿ, ತಾಲೂಕು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ಮೂಡಿತ್ತಾಯ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ್ ಗೌಡ , ಸುಳ್ಯ ಕ ರಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಲಿಂಗಪ್ಪ ಬೆಳ್ಳಾರೆ, ಪಂಜ- ಎಣ್ಮೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ್ ಕೆ, ಮೂಡಬಿದಿರೆ ದೈಹಿಕ ಶಿಕ್ಷಣ ಪರಿವೀಕ್ಷಕ ನವೀನ್ ಪುತ್ರನ್, ಮಂಗಳೂರು ಉತ್ತರ ದೈಹಿಕ ಶಿಕ್ಷಣ ಪರಿವೀಕ್ಷಕ ಭರತ್,
ಮುಖ್ಯ ಶಿಕ್ಷಕ ದೇವಿಪ್ರಸಾದ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸವಿತಾರ ಮುಡೂರು ಸೇರಿದಂತೆ ಅನೇಕ ಗಣ್ಯರು, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ಸ್ವಾಗತಿಸಿದರು.ಅರಂತೋಡು ಸ.ಹಿ.ಪ್ರಾ.ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಧನಂಜಯ ವಿಜೇತರ ಪಟ್ಟಿ ಯಾಚಿಸಿದರು. ಪಾಂಡಿಗದ್ದೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಶೋಕ್ ಕುಮಾರ್ ನಿಡುಬೆ ನಿರೂಪಿಸಿದರು. ಪಂಜ ಸರಕಾರಿ ಪದವಿ ಪೂರ್ವ ಕಾಲೇಜು ಮುಖ್ಯ ಶಿಕ್ಷಕ ದೇವಿಪ್ರಸಾದ್ ವಂದಿಸಿದರು.