ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ಸದೃಢ ಯುವ ಜನತೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ಡಾ. ಅನುರಾಧ ಕುರುಂಜಿ

ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ. ಎಂದು ಸುಳ್ಯ ಎನ್ನೆಂ ಸಿ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು.


ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂ
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯ ಹಾಗೂ ಸರಕಾರಿ ಪ್ರೌಢಶಾಲೆ ದುಗ್ಗಲಡ್ಕ ಇದರ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಜನಜಾಗೃತಿ ವೇದಿಕೆ ಜಾಲ್ಸೂರು ವಲಯಾಧ್ಯಕ್ಷ ಭಾಸ್ಕರ ಅಡ್ಕಾರ್, ಶಾಲಾ ಮುಖ್ಯಶಿಕ್ಷಕರು ಸುರೇಶ ಕುಮಾರ್ ಪಿ, ಶಾಲಾ ಎಸ್. ಡಿಎಂಸಿ ಅಧ್ಯಕ್ಷರು ಶ್ರೀಮತಿ ಶೀಲಾವತಿ ಪಿ, ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಜಯಶ್ರೀ, ಸೇವಾಪ್ರತಿನಿಧಿ ಸೌಮ್ಯ ಇದ್ದರು. ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪೋಷಕ ವೃಂದ ಉಪಸ್ಥಿತರಿದ್ದರು.