ಉಚಿತ ಆರೋಗ್ಯ ಶಿಬಿರ, ಕಾಫಿ ಬೆಳೆಯ ಮಾಹಿತಿ, ಮಾರಾಟ ಮೇಳ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಮಡಿಕೇರಿ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಡಿಕೇರಿ, ಸಹಕಾರ ಇಲಾಖೆ ಕೊಡಗು ಜಿಲ್ಲೆ, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ೭೨ ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ ಹಾಗೂ ಕಾರ್ಯದಕ್ಷತೆ ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿ ಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವ ದಿನಾಚರಣೆ ನ.೧೪ರಂದು ಪೆರಾಜೆ ಪ್ರಾಥಮಿಕ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಡಿಕೇರಿ ಅಧ್ಯಕ್ಷ ಕೆ.ಪಿ.ಗಣಪತಿ ಉದ್ಘಾಟಿಸಿದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ ಇದರ ಅಧ್ಯಕ್ಷ ಪಿ.ಯು. ರಾಬಿನ್ ದೇವಯ್ಯ ಸಹಕಾರ ಧ್ವಜಾರೋಹಣ ನೆರವೇರಿಸಿದರು.
















ಅಧ್ಯಕ್ಷತೆಯನ್ನು ಪೆರಾಜೆ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಬಾಲಚಂದ್ರ, ಭಾರತ ಕಾಫಿ ಮಂಡಳಿ ಸದಸ್ಯ ಟಿ.ಎ.ಕಿಶೋರ್ ಕುಮಾರ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರುಗಳಾದ ಕೆ.ಎಂ. ತಮ್ಮಯ್ಯ, ವಿ.ಕೆ. ಅಜಯ್ ಕುಮಾರ್, ಬಲ್ಲಾರಂಡ ಮಣಿ ಉತ್ತಪ್ಪ, ಎಸ್.ಆರ್. ಸುನಿಲ್ ರಾವ್, ಎಂ.ಟಿ. ಸುಬ್ಬಯ್ಯ, ಪಿ.ಎನ್. ಚಂದ್ರಪ್ರಕಾಶ್, ಶ್ರೀಮತಿ ಶ್ಯಾಮಲಾ ಎಂ.ಎಂ. ಎಚ್.ಕೆ. ಸತೀಶ್ ಕುಮಾರ್, ಕೆ.ಎನ್. ಸತೀಶ್, ಕೊಡಗು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಡಿ. ರವಿಕುಮಾರ್, ಪೆರಾಜೆ ಸಹಕಾರ ಸಂಘದ ಉಪಾಧ್ಯಕ್ಷ ಅಶೋಕ ಪಿ.ಎಂ. ಭಾಗವಹಿಸಿದ್ದರು.

ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
ಸಹಕಾರ ಸಪ್ತಾಹದ ಅಂಗವಾಗಿ ಉಚಿತ ಆರೋಗ್ಯ ಶಿಬಿರ, ಕಾಫಿ ಬೆಳೆಯ ಬಗ್ಗೆ ಮಾಹಿತಿ , ಸಂಜೀವಿನಿ ಒಕ್ಕೂಟದ ವತಿಯಿಂದ ಮಾರಾಟ ಮೇಳ ನಡೆಯಿತು.










