ಗೂನಡ್ಕ : ಮಾರುತಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಮಕ್ಕಳ ದಿನಾಚರಣೆ

0

ಗೂನಡ್ಕದ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ನರ್ಸರಿ ವಿದ್ಯಾರ್ಥಿಗಳಿಂದ ರಚಿಸಲಾದ My first book of ABC and More about myself” ಎಂಬ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.


ಬಳಿಕ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. 6ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ವಿಜ್ಞಾನ ಮತ್ತು ಆಧುನಿಕ ಯುಗದಲ್ಲಿ ಆಯುರ್ವೇದಿಕ ಔಷಧಿಯ ಬಗ್ಗೆ ತಿಳಿದುಕೊಳ್ಳಲು ಕೆವಿಜಿ ಆರ್ಯುವೇದ ಕಾಲೇಜಿಗೆ ಭೇಟಿ ನೀಡಿ ಅಲ್ಲಿನ ಪರಿಣಿತರಿಂದ ಸಂದರ್ಶಿಸಿ ಮಾಹಿತಿಯನ್ನು ಪಡೆದರು. ಮಕ್ಕಳಲ್ಲಿ ಕಲಿಕೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಮನೋಭಾವವನ್ನು ಹೆಚ್ಚಿಸಲು ಶಿಕ್ಷಕರು ನೃತ್ಯ ಪ್ರದರ್ಶನ ಮಾಡಿದರು.