ಮಾಜಿ ಸಚಿವ ರಮಾನಾಥ ರೈಯವರನ್ನು ಭೇಟಿ ಮಾಡಿದ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು

0

ಜೀರ್ಣೋದ್ಧಾರಗೊಂಡು ಬ್ರಹ್ಮ ಕಲಶದ ದಿನ ನಿಗಧಿಯಾಗಿರುವ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಮಾಜಿ ಸಚಿವ ರಮಾನಾಥ ರೈಯವರನ್ನು ನ.16ರಂದು ಭೇಟಿ ಮಾಡಿ ಮನವಿ ಪತ್ರ ನೀಡಿದರು.

ಬಳಿಕ ಜೀರ್ಣೋದ್ಧಾರಕ್ಕೆ ಆರ್ಥಿಕ ಕ್ರೋಢೀಕರಣ ಬಗ್ಗೆ ಮಾರ್ಗದರ್ಶನ ನೀಡಿದರು. ರಾಜ್ಯ ಧಾರ್ಮಿಕ ಪರಿಷತ್ತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪಕ್ಕಳ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ, ಕೋಶಾಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ, ಆಡಳಿತ ಮಂಡಳಿ ಕಾರ್ಯದರ್ಶಿ ಕುಶಾಲಪ್ಪ ಗೌಡ ಮಣಿಮಜಲು, ಪದಾಧಿಕಾರಿಗಳು ಮತ್ತು ಸದಸ್ಯರಾದ ಸುಧಾನಂದ ಮಣಿಯಾಣಿ, ಶೀನಪ್ಪ ಗೌಡ ಕೊಡಿಯಾಲ, ತಿಮ್ಮಪ್ಪ ಶೆಟ್ಟಿ, ಬಂಟ್ವಾಳ ಪಾಂಪೆ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ಸಾಯಿರಾಂ ಕುಂಡೇರಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.