ಪ್ರಕೃತಿ ಚಿಕಿತ್ಸೆ ಮಾಹಿತಿ ಮತ್ತು ಆರೋಗ್ಯ ತಪಾಸಣಾ ಶಿಬಿರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ , ಉಜಿರೆ ಹಾಗೂ ಮಯೂರಿ ಯುವತಿ ಮಂಡಲ ಮತ್ತು ಗರುಡ ಯುವಕ ಮಂಡಲ ಚೊಕ್ಕಾಡಿ ಇವುಗಳ ಆಶ್ರಯದಲ್ಲಿ ಪ್ರಕೃತಿ ಚಿಕಿತ್ಸೆ ಕುರಿತು ಮಾಹಿತಿ ಹಾಗೂ ಆರೋಗ್ಯ ತಪಾಸಣಾ ಶಿಬಿರವು ದಿನಾಂಕ ನ.15 ರಂದು ಚೊಕ್ಕಾಡಿಯ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದಲ್ಲಿ ನಡೆಯಿತು. ಶಿಬಿರದ ಉದ್ಘಾಟನೆಯನ್ನು ಕೇಶವ ಕರ್ಮಜೆ ನೆರವೇರಿಸಿದರು.









ಊರಿನ ಹಿರಿಯರಾದ ಶೀಲಾವತಿ ಕೊಳಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಯುವತಿ ಮಂಡಲದ ಅಧ್ಯಕ್ಷೆ ಹೇಮಾವತಿ ತಂಟೆಪ್ಪಾಡಿ ಮತ್ತು ಯುವಕ ಮಂಡಲದ ಅಧ್ಯಕ್ಷ ಅರುಣ್ ಕುಮಾರ್ ಪರಮಲೆ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಕೃತಿ ಚಿಕಿತ್ಸಾ ವಿಭಾಗದ ಕುಮಾರಿ ಪೂಜಾ ಹಾಗೂ ಕುಮಾರಿ ಪ್ರಕೃತಿಯವರು ಪ್ರಕೃತಿ ಚಿಕಿತ್ಸೆಯಿಂದ ಹೇಗೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎನ್ನುವುದರ ಮಾಹಿತಿಯನ್ನು ನೀಡಿದರು. ಬಳಿಕ ಎಲ್ಲರ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು. ಯುವತಿ ಯುವಕ ಮಂಡಲದ ಸದಸ್ಯರು ಹಾಗೂ ಊರಿನ ಬಾಂಧವರು ಉಪಸ್ಥಿತರಿದ್ದರು.
ಶ್ರೀಮತಿ ಪಾರ್ವತಿ ನೇಣಾರುರವರು ಪ್ರಾರ್ಥನೆಯನ್ನು ನೆರವೇರಿಸಿ, ಶ್ರೀಮತಿ ದಿವ್ಯ ಸ್ವಾಗತವನ್ನು ನೆರವೇರಿಸಿದರು. ಶ್ರೀಮತಿ ನಂದಿನಿ ಧನ್ಯವಾದವನ್ನು ಅರ್ಪಿಸಿ ಶ್ರೀಮತಿ ಉಷಾಲತಾ ಪಡ್ಪು ಕಾರ್ಯಕ್ರಮವನ್ನು ನಿರೂಪಿಸಿದರು.










