ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ವತಿಯಿಂದ ಮಕ್ಕಳ ದಿನಾಚರಣೆ ಐವರ್ನಾಡು ಪರ್ಲಿಕಜೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ಕುತ್ಯಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಪಲ್ಲವಿ ಕೆ ಎಲ್ ಅಧ್ಯಕ್ಷತೆ ವಹಿಸಿದ್ದರು.
















ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಉಷಾ ಪ್ರಸಾದ್ ರೈ, ಅಂಗನವಾಡಿ ಕಾರ್ಯಕರ್ತೆ ರೋಹಿತಾಕ್ಷಿ ಬಿ. ಎ, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತದ್ದರು. ಶಾಲಾ ಪೂರ್ವ ಶಿಕ್ಷಣದ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಅಂಗನವಾಡಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ಗಳನ್ನು ವಿತರಿಸಲಾಯಿತು. ಜ್ಞಾನದೀಪ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿ ರಚನಾ ಸ್ವಾಗತಿಸಿ, ಶುಭಲತಾ ವಂದಿಸಿದರು. ಚಿತ್ರಾ ಪಿ ಕಾರ್ಯಕ್ರಮ ನಿರ್ವಹಿಸಿದರು.










