ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನ.15 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕ. ಸಾ. ಪ ಸುಳ್ಯ ತಾಲೂಕಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಪ್ರತಿಭಾ ಕಾರಂಜಿ ಆರಂಭವಾದ ವರ್ಷದಿಂದ ವಿದ್ಯಾರ್ಥಿಗಳ ಪ್ರತಿಭೆ ರಾಜ್ಯಮಟ್ಟದವರೆಗೆ ತಲುಪಿದೆ. ವಿದ್ಯಾರ್ಥಿಗಳ ಪ್ರತಿಭೆಗೆ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅರಂತೋಡು ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಟಿ. ಎಂ ಶಹೀದ್ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರು ಇವರನ್ನು ಸನ್ಮಾನಿಸಲಾಯಿತು.

ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತೀಶ್ ನಾಯ್ಕ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸುರೇಶ್ ಯು ಕೆ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ, ಗ್ರಾಮಪಂಚಾಯತ್ ಸದಸ್ಯರಾದ ಶಿವಾನಂದ ಕುಕ್ಕುಂಬಳ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ದೇವರಾಜ್, ಸರಕಾರಿ ನೌಕರರ ಸಂಘದ ಖಜಾಂಜಿ ಶ್ರೀಮತಿ ಶೀಲಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರತಿಭಾ ಕಾರಂಜಿಯ ಸ್ಪರ್ಧಾ ಕಾರ್ಯಕ್ರಮಕ್ಕೆ ಅರಂತೋಡು ಕ್ಲಸ್ಟರ್ ನ 12 ಶಾಲೆಗಳು ಭಾಗವಹಿಸಿ ಸುಮಾರು 250 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಾ ಕಾರಂಜಿಯ ಸ್ಪರ್ಧಾ ನಿರ್ಣಾಯಕರಾಗಿ ಸುಳ್ಯ ಮತ್ತು ಆಲೆಟ್ಟಿ ಕ್ಲಸ್ಟರ್ ನ ಶಿಕ್ಷಕರು ಭಾಗವಹಿಸಿದ್ದರು. ಸ್ಪರ್ಧೆಗಳ ನಿರ್ವಾಹಕರಾಗಿ ಅರಂತೋಡು ಕ್ಲಸ್ಟರ್ನ ಶಿಕ್ಷಕರು ಸಹಕರಿಸಿದರು.
















ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಚಿನ್ನ ಬೆಳ್ಳಿ ಕಂಚಿನ ಪದಕಗಳ ನೀಡಿ ಗೌರವಿಸಲಾಯಿತು ಸ್ಪರ್ಧೆಗಳಲ್ಲಿ ಭಾಗವಹಿಸಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಶಾಲೆಗಳಿಗೆ ಸಮಗ್ರ ಪ್ರಶಸ್ತಿಗಳನ್ನು ನೀಡಿ ಅಭಿನಂದಿಸಲಾಯಿತು .
ಹಿರಿಯ ವಿಭಾಗದ ಸಮಗ್ರ ಪ್ರಥಮ ಸ್ಥಾನವನ್ನು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಅರಂತೋಡು ದ್ವಿತೀಯ ಸ್ಥಾನವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ತೊಡಿಕಾನ ಕಿರಿಯರ ವಿಭಾಗದ ಸಮಗ್ರ ಪ್ರಥಮ ಸ್ಥಾನವನ್ನು ಸವೇರಪುರ ಅಂಗ್ಲ ಮಾಧ್ಯಮ ಶಾಲೆ ಕಲ್ಗುಗುಂಡಿ, ಕಿರಿಯರ ವಿಭಾಗದ ಸಮಗ್ರ ದ್ವಿತೀಯ ಸ್ಥಾನವನ್ನು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸಮಗ್ರ ಮಿತ್ತಡ್ಕಮರ್ಕಂಜ ಪಡೆದುಕೊಂಡಿತ್ತು.
ಸಮಗ್ರ ಪ್ರಶಸ್ತಿ ಮತ್ತು ಪದಕಗಳನ್ನು ಅರಂತೋಡು ಮತ್ತು ಸುಳ್ಯ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತ ಕೆ. ಇವರು ಕೊಡುಗೆಯಾಗಿ ನೀಡಿದರು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಶಾಲಾ ಶಿಕ್ಷಕಿ ಶ್ರೀಮತಿ ಭಾನುಮತಿ ಅವರು ನಿರ್ವಹಿಸಿದರು. ಗೋಪಾಲಕೃಷ್ಣ ಬನ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ ಕೆ ಇವರು ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಧನಂಜಯ ವಂದಿಸಿದರು. ಅರಂತೋಡು ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಭಾನುಮತಿ ನಿರೂಪಿಸಿದರು.










