ಬ್ಲೆಸ್ಡ್ ಕುರಿಯಾಕೋಸ್ ವಿದ್ಯಾಸಂಸ್ಥೆಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ

0

ನ. 18ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಗುತ್ತಿಗಾರು ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ನಲ್ಲಿ ನಡೆದಿದ್ದು ಬ್ಲೆಸ್ಡ್ ಕುರಿಯಾಕೋಸ್ ವಿದ್ಯಾಸಂಸ್ಥೆಗೆ ಕ್ಲಸ್ಟರ್ ಮಟ್ಟದ ಕಿರಿಯ ಪ್ರಾಥಮಿಕ ವಿಭಾಗ ಮತ್ತು ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ಪ್ರಥಮ ಬಹುಮಾನವನ್ನು ಪಡೆದುಕೊಂಡಿದೆ.