ಪೇರಾಲಿನಲ್ಲಿ ಅಜ್ಜಾವರ ಕ್ಲಸ್ಟರ್ ಪ್ರತಿಭಾ ಕಾರಂಜಿ

0

ಪೇರಾಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ. 18ರಂದು ಅಜ್ಜಾವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ನಡೆಯಿತು.

ಮಂಡೆಕೋಲು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಕುಶಲ ಉದ್ದಂತಡ್ಕ ಅಧ್ಯಕ್ಷತೆಯನ್ನು ವಹಿಸಿದ್ದರು . ಪ್ರತಿಭಾ ಕಾರಂಜಿ ಸಮಿತಿಯ ಅಧ್ಯಕ್ಷರಾಗಿದ ಶಿವರಾಮ ಕೇನಾಜೆ ಹಾಗೂ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಭವ್ಯ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೇವಕಿ, ಮಂಡೆಕೋಲು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತಿಲಕ ಕುತ್ಯಾಡಿ ಮತ್ತು ಶ್ರೀಮತಿ ದಿವ್ಯಲತಾ ಚೌಟಾಜೆ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಮೋಹನ್ ದಾಸ ಕುಕ್ಕುಡೇಲು, ಸಮಗ್ರ ಟ್ರೋಫಿಯ ದಾನಿಗಳಾದ ಅಬ್ದುಲ್ ರಹಿಮಾನ್ ಸಂಕೇಶ, ಸುಳ್ಯ ಎಸ್. ಡಿ .ಎಂ. ಸಿ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ,ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸಂಘದ ಕಾರ್ಯದರ್ಶಿಗಳಾದ ಗೋಪಿನಾಥ ಮೆತ್ತಡ್ಕ ,ಶಿಕ್ಷಣ ಸಂಯೋಜಕರಾದ ಶ್ರೀಮತಿ ಧನಲಕ್ಷ್ಮಿ ಕುದ್ಪಾಜೆ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಲತಾಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರತಿಭಾ ಕಾರಂಜಿ ಸಮಿತಿಯ ಸದಸ್ಯರಾದ ಪದ್ಮನಾಭ ಚೌಟಾಜೆ ಸ್ವಾಗತಿಸಿ ,ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಲತಾಶ್ರೀ ಎಸ್. ಕೆ ವಂದಿಸಿದರು. ಶ್ರೀಮತಿ ಆಶಾ ಕೆ ಟಿ ಕಾರ್ಯಕ್ರಮದ ನಿರೂಪಣೆ ಮಾಡಿದರು.