ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನಾಚರಣೆಯ – ವಿಶೇಷ ಕಾರ್ಯಕ್ರಮ

0

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಜನರಲ್ ಮೆಡಿಸಿನ್ ವಿಭಾಗದ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ. ಪ್ರಕಾಶ್ ರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಮಧುಮೇಹ ಜಾಗೃತಿ, ತಡೆಗಟ್ಟುವಿಕೆಗೆ ಸಂಬಂಧಿಸಿದ ಅರಿವಿನ ಅಗತ್ಯತೆ ಮತ್ತು ಅದರ ಸಾಮಾಜಿಕ ಪ್ರಾಮುಖ್ಯತೆಯನ್ನು ತಿಳಿಸಿದರು.
ಜನರಲ್ ಮೆಡಿಸಿನ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಸರ್ಫರಾಜ್ ಜಮಾಲ್ ನೇತೃತ್ವದಲ್ಲಿ ಕ್ವಿಜ್ ಸ್ಪರ್ಧೆ ನಡೆಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಮಾತನಾಡಿ ವಿಶ್ವ ಮಧುಮೇಹ ದಿನದ ಮಹತ್ವದ ಕುರಿತು ವಿಶೇಷ ಮಾಹಿತಿಯನ್ನು ಹಂಚಿಕೊಂಡರು. ಬಳಿಕ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ, ಸ್ಪರ್ಧಾ ವಿಜೇತರ ಸಾಧನೆ ಮತ್ತು ಆಯೋಜನಾ ತಂಡದ ಶ್ರಮವನ್ನು ಅವರು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಸಹ ಸಂಸ್ಥೆಗಳ ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭೋದಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.