ಕನಕಮಜಲು ಸಹಕಾರಿ ಸಂಘದ ನೇತೃತ್ವದಲ್ಲಿ ಜಿಲ್ಲಾಮಟ್ಟದ 72ನೇ ಸಹಕಾರ ಸಪ್ತಾಹ ಸಮಾರೋಪ

0

ಕನಕಮಜಲಿನಿಂದ ವಿನೋಬನಗರದವರೆಗೆ ವಾಹನ ಜಾಥಾ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು, ಸುಳ್ಯ ತಾಲೂಕು ಸಹಕಾರಿ ಯೂನಿಯನ್, ಸುಳ್ಯ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಇತರ ಸಂಘಗಳ

ಸಹಕಾರದೊಂದಿಗೆ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶಯದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭವು ಇಂದು ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ರಜತಕಿರಣ ಸಭಾಂಗಣದಲ್ಲಿ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಕನಕ ಮಜಲು ಸಹಕಾರಿ ಸಂಘದ ಆವರಣದಿಂದ ವಿನೋಭಾನಗರದವರೆಗೆ ವಾಹನ ಜಾಥಾ ನಡೆಯಿತು.

ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಚನ್ನಕೇಶವ ಜಾಲ್ಸುರುರವರು ವಾಹನ ಜಾಥಾಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಇದಕ್ಕೂ ಮೊದಲು ಕಾರ್ಯಕ್ರಮಕ್ಕೆ ಸಹಕಾರಿ ಧ್ವಜಾರೋಹಣ ಮೂಲಕ ಕನಕಮಜಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಪ್ರಸಾದ್ ಭಟ್ ಜಿ. ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಕಾಮತ್,

ಉಪಾಧ್ಯಕ್ಷ ವೆಂಕಪ್ಪ ನಾಯ್ಕ ದೇರ್ಕಜೆ, ನಿರ್ದೇಶಕರುಗಳು, ಮಾಜಿ ಅಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು,ಸಿಬ್ಬಂದಿ ವರ್ಗ, ಸದಸ್ಯರು ಉಪಸ್ಥಿತರಿದ್ದರು.