
ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಬೆಳ್ಳಾರೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಶಾಲಾ ಪಯಸ್ವಿನಿ ರಂಗಮಂದಿರದಲ್ಲಿ ಗುರುವಾರ ನಡೆಯಿತು.
ಕಾರ್ಯಕ್ರಮಕ್ಕೆ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಹಾಗೂ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ದೀಪಬೆಳಗಿಸಿ ಚಾಲನೆ ನೀಡಿದರು.















ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿದರು.
ಅತಿಥಿಗಳಾಗಿ ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ, ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ನಾರಾಯಣ ಬೊಳ್ಳೂರು, ಸಿ.ಆರ್.ಪಿ ಅನುರಾಧ, ಎಸ್ ಡಿ ಎಂ ಸಿ ಅಧ್ಯಕ್ಷ ಚಂದ್ರಶೇಖರ, ಮುಖ್ಯ ಶಿಕ್ಷಕಿ ಜಯ ಲತಾ ಕೆ.ಆರ್ ಭಾಗವಹಿಸಿದರು.
ಶಿಕ್ಷಕಿ ಸವಿತ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಮೀನ ಕುಮಾರಿ ವಂದಿಸಿದರು.










