ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಮಾರೋಪ

0

ಸುಳ್ಯ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅಕ್ಟೋಬರ್ 22 ರಂದು ಆರಂಭಗೊಂಡ ಕಾರ್ತಿಕ ದೀಪೋತ್ಸವದ ಸಮಾರೋಪ ಸಮಾರಂಭ ನವೆಂಬರ್ 20 ರಂದು ದೇವಸ್ಥಾನದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವೆಂಕಪ್ಪ ಗೌಡರು ವಹಿಸಿದ್ದರು. ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜ್ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ್, ತಹಶೀಲ್ದಾರ್ ಮಂಜುಳ, ಬ್ತಹ್ಮಕಲಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಕೃಷ್ಣ ಕಾಮತ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ನಾರಾಯಣ ಕೇಕಡ್ಕ ಹಾಗೂ ಪಿ.ಕೆ.ಉಮೇಶ್, ದೇಂಗೋಡಿ ಶ್ರೀ ಮಲೆದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚಂದ್ರಶೇಖರ ಅಡ್ಪಂಗಾಯ, ಸೇವಾ ಸಮಿತಿ ಸಂಚಾಲಕ ಕಿಶೋರ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಶ್ರೀಮತಿ ಶ್ರುತಿ ಮಂಜುನಾಥ ಸ್ವಾಗತಿಸಿ, ಜತ್ತಪ್ಪ ರೈ ವಂದಿಸಿದರು. ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ವಿಠಲ ಬಾಣೂರು, ಕುಶಾಲಪ್ಪ ಸೂರ್ತಿಲ, ನೀಲಕಂಠ ಎಂ.ಡಿ., ಶ್ರೀಮತಿ ಕುಸುಮಾವತಿ ರಾಮಕೃಷ್ಣರು ವೇದಿಕೆಯಲ್ಲಿ ಉಪಸ್ಥಿತರಿದ್ದರು.