ದ್ವಿಚಕ್ರ ವಾಹನದಿಂದ ಬಿದ್ದು ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಳೆ ಗೇಟು ತಮಿಳ್ ಕಾಲೋನಿ ನಿವಾಸಿ ರಾಮಕೃಷ್ಣ (52 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.















ನ 19 ರಂದು ರಾತ್ರಿ ಸುಮಾರು 9 ಗಂಟೆಗೆ ಹಳೆಗೇಟಿ ನಿಂದ ತಮಿಳ್ ಕಾಲೋನಿ ಅವರ ಮನೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭ ಸ್ಕಿಡ್ಡಾಗಿ ರಸ್ತೆಯಲ್ಲಿ ಬಿದ್ದಿದ್ದರು.
ಘಟನೆಯಿಂದ ಅವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು ಸ್ಥಳೀಯರು ಕೂಡಲೇ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಅವರನ್ನು ಕಳುಹಿಸಿಕೊಡಲಾಗಿತ್ತು.
ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನವಂಬರ್ 21ರಂದು ಬೆಳಿಗ್ಗೆ ಅವರು ಮೃತಪಟ್ಟಿದ್ದಾರೆ.
ಮೃತರು ಪತ್ನಿ ಸುಂದರಿ ಹಾಗೂ ಇಬ್ಬರು ಪುತ್ರಿಯರು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.










