⬆️ ಹಿರಿಯ ವಿಭಾಗ ಪಂಜ l ಕಿರಿಯ ವಿಭಾಗ ಪಾಂಡಿಗದ್ದೆ : ಸಮಗ್ರ ಪ್ರಥಮ
















ಕರ್ನಾಟಕ ಸರಕಾರ,ದ.ಕ.ಜಿ.ಪಂ. ಶಾಲಾ ಶಿಕ್ಷಣ ಇಲಾಖೆ.ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ,ಸಮೂಹ ಸಂಪನ್ಮೂಲ ಕೇಂದ್ರ ಪಂಜ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಗತೀರ್ಥ ಇದರ ವತಿಯಿಂದ ಪ್ರಾಥಮಿಕ ಶಾಲಾ ಕಿರಿಯ ಮತ್ತು ಹಿರಿಯ ವಿಭಾಗದ ಪಂಜ ಕ್ಲಸ್ಟರ್ ಮಟ್ಟದ
ಪ್ರತಿಭಾ ಕಾರಂಜಿ-2025-26
ನ.22 ರಂದು ನಾಗತೀರ್ಥ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಂಜೆ ಸಮಾರೋಪ – ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು.

ಫಲಿತಾಂಶ:
ಹಿರಿಯ ವಿಭಾಗ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪಂಜ ಪ್ರಥಮ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಂಡಿಗದ್ದೆ ದ್ವಿತೀಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಪಿನಂಗಡಿ ತೃತೀಯ ಸಮಗ್ರ ಪ್ರಶಸ್ತಿ ಸ್ವೀಕರಿಸಿದರು.ಕಿರಿಯ ವಿಭಾಗದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಂಡಿಗದ್ದೆ ಪ್ರಥಮ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪಂಜ ದ್ವಿತೀಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಡ್ಕ ತೃತೀಯ ಸಮಗ್ರ ಪಡೆದು ಪ್ರಶಸ್ತಿ ಸ್ವೀಕರಿಸಿದರು.
ಸಮಾರೋಪ ಸಮಾರಂಭ:
ಎಸ್ ಡಿ ಎಂ ಸಿ ಅಧ್ಯಕ್ಷ ಮಧುಚಂದ್ರ ಆಚಾರ್ಯ ಕುದ್ವ ಸಭಾಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ನಿವೃತ್ತ ಶಿಕ್ಷಕ ಸೀತಾರಾಮ ಗೌಡ ಕುದ್ದ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ, ಪಂಜ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನುರಾಜ್ ಕಕ್ಯಾನ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಕವಿತಾ ಪುತ್ಯ, ಪಂಜ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ್ ಕೆ, ಸುಬ್ರಹ್ಮಣ್ಯ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಸುಬ್ರಮಣ್ಯ, ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಗಿರಿಜಾ ವೇದಿಕೆಯಲ್ಲಿ ಕೆ ಆರ್ ಉಪಸ್ಥಿತರಿದ್ದರು.
ಮುಂದಿನ ವರ್ಷದ ಪ್ರತಿಭಾ ಕಾರಂಜಿಯ ಜವಾಬ್ದಾರಿಯನ್ನು ಕರಿಕ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇವರಿಗೆ ವೀಳ್ಯ ನೀಡಿ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ವಿದ್ಯಾಶ್ರೀ ಗೌಡ ನಿರೂಪಿಸಿದರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನುರಾಜ್ ಕಕ್ಯಾನ ಸ್ವಾಗತಿಸಿದರು. ಗೌರವ ಶಿಕ್ಷಕಿ ಶ್ರೀಮತಿ ನವೀನ ಕುಮಾರಿ ವಂದಿಸಿದರು.










