ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಕುಕ್ಕೆ ಸುಬ್ರಹ್ಮಣ್ಯದ ಪ್ರಮುಖ ರಸ್ತೆಗೆ ನಾಮಕರಣ ಮಾಡಲು ಕರ್ನಾಟಕ ಅರಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಮಾಜಿ ಸದಸ್ಯ ದಿನೇಶ್ ಹಾಲೆಮಜಲುರವರು ಮುಜರಾಯಿ ಸಚಿವರಿಗೆ ಹಾಗೂ ದೇವಸ್ಥಾನದ ದೇವಸ್ಥಾನ ಸಮಿತಿಯ ಅಧ್ಯಕ್ಷರಿಗೆ ಮನವಿ ಮಾಡಿದರು.















ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ರವರನ್ನು ಭೇಟಿ ಮಾಡಿದ ಕರ್ನಾಟಕ ಅರಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಮಾಜಿ ಸದಸ್ಯ ದಿನೇಶ್ ಹಾಲೆಮಜಲು ರವರು ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳುವ ನಿಟ್ಟಿನಲ್ಲಿ 1857ರಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಆಡಳಿತ ನೋಡಿಕೊಳ್ಳುತ್ತಿದ್ದು ಸ್ವಾತಂತ್ರ್ಯ ಹೋರಾಟಗಾರಾಗಿ ಹುತಾತ್ಮರಾದ ಕೂಜುಗೋಡು ಮನೆ ಮಲ್ಲಪ್ಪಗೌಡ ಅಪ್ಪಯ್ಯಗೌಡರ ಹೆಸರನ್ನು ಸುಬ್ರಹ್ಮಣ್ಯದಲ್ಲಿ ಹಾದುಹೋಗುವ ಪ್ರಮುಖ ರಸ್ತೆಗೆ ನಾಮಕರಣ ಮಾಡುವಂತೆ ಹಾಗೂ ಅವರ ಪ್ರತಿಮೆಯನ್ನು ಸ್ಥಾಪಿಸಿ ವೃತ್ತ ನಿರ್ಮಿಸುವಂತೆ ಮನವಿ ಮಾಡಿಕೊಳ್ಳಲಾಯಿತು.










