ಮಂಡೆಕೋಲು: ಮುರೂರು ಚೆಕ್ ಪೋಸ್ಟ್ ಮತ್ತು ಮುರೂರು ಬಸ್ ಸ್ಟ್ಯಾಂಡ್ ಬಳಿ ಪಂಚಸಪ್ತತಿ ಸ್ವಚ್ಛತಾ ಕಾರ್ಯಕ್ರಮ

0

ಮಂಡೆಕೋಲು ವೀರವನಿತೆ ಕ್ರೀಡಾ ಮತ್ತು ಕಲಾಸಂಘ ಮಂಡೆಕೋಲು ಇದರ ವತಿಯಿಂದ ಯುವಜನ ಸಂಯುಕ್ತ ಮಂಡಳಿಯವರು ಹಮ್ಮಿಕೊಂಡಿರುವ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚಸಪ್ತತಿ 2025 ಇದರ ಅಂಗವಾಗಿ ಕರ್ನಾಟಕ ಕೇರಳದ ಗಡಿ ಭಾಗವಾದ ಮಂಡೆಕೋಲು ಗ್ರಾಮದ ಮುರೂರು ಚೆಕ್ ಪೋಸ್ಟ್ ಬಳಿ ಹಾಗೂ ಮೂರೂರು ಬಸ್ ಸ್ಟ್ಯಾಂಡ್ ಹಾಗೂ ಸುತ್ತಮುತ್ತ ಕಾಡು ಕಡಿದು ಕಸ ಹೆಕ್ಕಿ ಸ್ವಚ್ಛತೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಡೆಕೋಲು ಗ್ರಾಮ ಪಂಚಾಯತ್ ಸದಸ್ಯರಾದ ಬಾಲಚಂದ್ರ ದೇವರಗುಂಡ , ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾದ ಜಲಜಾಕ್ಷಿ ದೇವರಗುಂಡ ಮತ್ತು ನಿರ್ದೇಶಕರಾದ ಚಂದ್ರಜಿತ್ ಮಾವಂಜಿ , ಯುವಜನ ಸಂಯುಕ್ತ ಮಂಡಳಿ ಉಪಾಧ್ಯಕ್ಷೆ ಶ್ರೀಮತಿ ವಿನುತ ಪಾತಿಕಲ್ಲು ಕಾರ್ಯಕ್ರಮದ ಬಗ್ಗೆ ಶುಭ ಹಾರೈಸಿ ಮಾತನಾಡಿದರು . ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಂಡೆಕೋಲು ಗ್ರಾಮ ಪಂಚಾಯತ್ ಸದಸ್ಯ ನವೀನ್ ಮುರೂರು ,ವೀರವನಿತೆ ಕ್ರೀಡಾ ಮತ್ತು ಕಲಾ ಸಂಘದ ಅಧ್ಯಕ್ಷರಾದ ವಸಂತಿ ಉಗ್ರಾಣಿಮನೆ ,ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಸ್ಥರು ಉಪಸ್ಥಿತರಿದ್ದು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು .