














ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೃತ್ಯ ಮತ್ತು ಅಭಿನಯದ ಮೂಲಕ ಪರಿಣಾಮಕಾರಿಯಾಗಿ ಬೋಧಿಸಲು ಅಗತ್ಯವಾದ ಎರಡು ದಿನಗಳ ರಂಗ ಚಟುವಟಿಕೆ ಶಿಬಿರ ವು ನ.27 ಮತ್ತು ನ.28ರಂದು ನಡೆಯಲಿದೆ ಕಾಂತಾರ ಮತ್ತು ಸುಫ್ರಮ್ ಸೋ ಖ್ಯಾತಿಯ ಜಾನಪದ ಕಲಾವಿದ ಮೈಮ್ ರಾಮ್ ದಾಸ್, ಕಾರ್ಕಳದ ವರ್ಧಮಾನ ಶಿಕ್ಷಣ ಸಂಸ್ಥೆಗಳ ಸಂಚಾಲಕಿ ಶಶಿಕಲಾ ಹೆಗ್ಡೆ,
ತುಳು ಚಲನಚಿತ್ರ ನಟಿ ವಿಧೂಷಿ ಮಲ್ಲಿಕಾ ಜ್ಯೋತಿಗುಡ್ಡೆ, ಮತ್ತು ರಂಗ ನಿರ್ದೇಶಕ ಕೃಷ್ಣಪ್ಪ ಬಂಬಿಲ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಆಸಕ್ತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕಿಯರು ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ತಿಳಿಸಿದ್ದಾರೆ.










